ನವದೆಹಲಿ: ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಪ್ರಮಾಣ 63.24% ಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ದೇಶದ ಒಟ್ಟಾರೆ ಸೋಂಕಿತರಲ್ಲಿ 6 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗುವ ಮೂಲಕ ಗುಣಮುಖರಾದವರ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 20,572 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಆ ಮೂಲಕ ಚೇತರಿಸಿಕೊಂಡವರ ಸಂಖ್ಯೆ 5,92,031 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೊರೋನಾ ಸೋಂಕಿನ ಮಾದರಿಗಳ ಪರೀಕ್ಷೆಯ ತ್ವರಿತ ಗತಿ, ಸಮಯೋಚಿತ ರೋಗ ನಿರ್ಣಯ, ಪರಿಣಾಮಕಾರಿ ಚಿಕಿತ್ಸೆ, ಸರ್ಕಾರಿ ಅಥವಾ ಹೋಂ ಕ್ವಾರಂಟೈನ್ ಮೊದಲಾದವುಗಳಿಂದಲೇ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿನಿಂದ ಗುಣಮುಖರಾಗುತ್ತಿದ್ದಾರೆ ಎಂದೂ ಸಚಿವಾಲಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದ್ಯ ದೇಶದಲ್ಲಿ 3,19,840 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಕ್ರಿಯ ಪ್ರಕರಣಗಳಿಗಿಂತ ಹೆಚ್ಚಿನ ಜನರು ಗುಣಮುಖರಾಗಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಗಿಂತ ಚೇತರಿಸಿಕೊಂಡವರು 2,72,191 ಗೂ ಅಧಿಕ ಸಂಖ್ಯೆಯಲ್ಲಿರುವುದಾಗಿಯೂ ಸಚಿವಾಲಯ ತಿಳಿಸಿದೆ.
ಭಾರತದಲ್ಲಿ ಸುಮಾರು 1378 ಆಸ್ಪತ್ರೆ ಗಳು ಕೊರೋನಾ ಗೆ ಚಿಕಿತ್ಸೆ ನೀಡುತ್ತಿದ್ದು, ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒಳಗೊಂಡು ಸುಸಜ್ಜಿತವಾಗಿವೆ. 3077 ಕೊರೋನಾ ಆರೋಗ್ಯ ಕೇಂದ್ರಗಳು, 10,351 ಕೊರೋನಾ ಆರೈಕೆ ಕೇಂದ್ರಗಳೂ ಸಹ ಭಾರತದಲ್ಲಿ ಕೊರೋನಾ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿವೆ. 21738 ವೆಂಟಿಲೇಟರ್ಗಳು, 46,487 ತುರ್ತು ನಿಗಾ ಘಟಕಗಳಲ್ಲಿನ ಹಾಸಿಗೆಗಳು, 1.65 ಲಕ್ಷಕ್ಕೂ ಅಧಿಕ ಆಕ್ಸಿಜನ್ ಬೆಡ್ ಗಳನ್ನು ಸಹ ರೋಗಿಗಳ ಚಿಕಿತ್ಸೆಗೆ ಬಳಕೆ ಮಾಡಲಾಗುತ್ತಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ.
ಜೊತೆಗೆ ಕೊರೋನಾ ಹರಡದಂತೆ ತಡೆಯಲು 231 ಲಕ್ಷ ಎನ್95 ಮಾಸ್ಕ್, 123 ಲಕ್ಷ ಪಿಪಿಇ ಕಿಟ್ ಗಳು, 11,660 ವೆಂಟಿಲೇಟರ್ ಗಳನ್ನು ಕೇಂದ್ರ ಸರ್ಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈಗಾಗಲೇ ಕಳುಹಿಸಿರುವುದಾಗಿಯೂ ಸಚಿವಾಲಯ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.