ನವದೆಹಲಿ: ಇಡೀ ಜಗತ್ತಿಗೆ ಅಗತ್ಯವಿರುವಷ್ಟು ಕೊರೋನಾ ಔಷಧಗಳನ್ನು ತಯಾರಿಸಿ, ವಿತರಣೆ ಮಾಡುವ ಶಕ್ತಿ ಭಾರತದ ಔಷಧ ಕಂಪೆನಿಗಳಿಗಿದೆ ಎಂದು ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ತಿಳಿಸಿದ್ದಾರೆ.
ಡಿಸ್ಕವರಿ ಪ್ಲಸ್ ಚಾನೆಲ್ ನ ‘ಕೋವಿಡ್-19 ಇಂಡಿಯನ್ ವಾರ್ ಎಗೆನೆಸ್ಟ್ ದ ವೈರಸ್’ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಇತರ ಕಾಯಿಲೆಗಳಿಗೆ ಪರಿಣಾಮಕಾರಿಯಾಗಿರುವ ಔಷಧ, ಲಸಿಕೆಗಳನ್ನು ಕಂಡುಹಿಡಿಯುವಲ್ಲಿ ಮತ್ತು ವಿತರಿಸುವಲ್ಲಿ ಭಾರತದ ಔಷಧ ಕಂಪೆನಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿವೆ. ಕೊರೋನಾ ಸೋಂಕಿಗೂ ಪರಿಹಾರ ಕಂಡುಹುಡುಕುವ ನಿಟ್ಟಿನಲ್ಲಿಯೂ ಪರಿಣಾಮಕಾರಿಯಾಗಿ ಕೆಲಸ ಮಾಡಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಜನಸಂಖ್ಯೆ ಹೆಚ್ಚು. ಇಲ್ಲಿನ ಗ್ರಾಮ, ನಗರ ಪ್ರದೇಶಗಳಲ್ಲಿನ ಜನ ಸಾಂದ್ರತೆಯ ಕಾರಣದಿಂದಾಗಿ ಸೋಂಕನ್ನು ತಡೆಗಟ್ಟುವಲ್ಲಿ ಹಿನ್ನಡೆ ಅನುಭವಿಸಬೇಕಾಗಿರುವ ಸ್ಥಿತಿ ಇದೆ. ಈ ಸವಾಲನ್ನು ಭಾರತ ಸಮರ್ಥವಾಗಿ ಎದುರಿಸುತ್ತದೆ ಎಂಬ ಭರವಸೆಯನ್ನೂ ಬಿಲ್ ಗೇಟ್ಸ್ ನೀಡಿದ್ದಾರೆ. ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಉತ್ಪಾದನೆ ಮಾಡುವ ಅನೇಕ ಸಂಸ್ಥೆಗಳಿವೆ. ಭಾರತದ ಅನೇಕ ಔಷಧ ಕಂಪೆನಿಗಳು ಲಸಿಕೆ ಕಂಡುಹುಡುಕುವ ನಿಟ್ಟಿನಲ್ಲಿ ಸಾಕಷ್ಟು ಶ್ರಮ ವಹಿಸುತ್ತಿದ್ದಾರೆ. ಇತರ ಔಷಧ, ಲಸಿಕೆಗಳನ್ನು ಕಂಡುಹಿಡಿಯುವಲ್ಲಿ ಬಳಕೆಯಾಗಿರುವ ಎಲ್ಲಾ ಜ್ಞಾನವನ್ನು ಬಳಕೆ ಮಾಡಿ, ಹೊಸ ಅನ್ವೇಷಣೆಯನ್ನು ನಡೆಸುವಲ್ಲಿ ದೇಶೀಯ ಔಷಧ ತಯಾರಿಕಾ ಸಂಸ್ಥೆಗಳು ಸದಾ ಸನ್ನದ್ಧವಾಗಿರುವುದಾಗಿಯೂ ಬಿಲ್ ಗೇಟ್ಸ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.