ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 3 ಉಗ್ರರನ್ನು ವಧಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಮೂವರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಲ್ಗಾಂ ಪ್ರದೇಶದ ನಾಗ್ನಾಡ್ ನಲ್ಲಿ ಉಗ್ರಗಾಮಿಗಳು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ, ಇಂದು ಮುಂಜಾನೆ ಕಾರ್ಯಾಚರಣೆ ನಡೆಸಿತ್ತು. ಈ ಸುದ್ದಿ ತಿಳಿದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಇದೇ ವೇಳೆ ಪ್ರತಿದಾಳಿ ನಡೆಸಿರುವ ಭದ್ರತಾ ಪಡೆಯ ಸಿಬ್ಬಂದಿಗಳು 3 ಉಗ್ರರನ್ನು ಸಂಹರಿಸಿದ್ದಾರೆ. ಉಗ್ರರ ಗುಂಡಿಗೆ ಮೂವರು ಯೋಧರು ಗಾಯಗೊಂಡಿದ್ದಾರೆ.
ವಧಿಸಲ್ಪಟ್ಟ ಓರ್ವ ಉಗ್ರನಿಂದ ರೈಫಲ್ ವಶಪಡಿಸಿಕೊಂಡಿರುವುದಾಗಿಯೂ ಭದ್ರತಾ ಪಡೆ ಮಾಹಿತಿ ನೀಡಿದೆ. ಸಂಹರಿಸಲ್ಪಟ್ಟ ಉಗ್ರರು ಜೈಶೇ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದೂ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪ್ರದೇಶದಲ್ಲಿ ಮತ್ತಷ್ಟು ಕಾರ್ಯಾಚರಣೆಗಳು ನಡೆಯುತ್ತಿರುವುದಾಗಿಯೂ ಭದ್ರತಾ ಪಡೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.