ಅಯೋಧ್ಯಾ: ಇಂದು ಅಯೋಧ್ಯೆಯಲ್ಲಿರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆಯನ್ನು ನಡೆಸುವ ದಿನಾಂಕವನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ.
ರಾಮ ದೇಗುಲ ನಿರ್ಮಾಣ ಸಮಿತಿಯ ಮುಖ್ಯಸ್ಥರಾದ ನೃಪೇಂದ್ರ ಮಿಶ್ರಾ ಅವರು ಈಗಾಗಲೇ ಸಭೆಗಾಗಿ ಅಯೋಧ್ಯೆಗೆ ಆಗಮಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಮಾತ್ರವಲ್ಲದೆ, ಹಿರಿಯ ಎಂಜಿನಿಯರ್ಗಳು ಕೂಡ ಅಯೋಧ್ಯಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ. ಇವರುಗಳು ದೇಗುಲ ನಿರ್ಮಾಣದ ಬಗ್ಗೆ ಪರಿಶೀಲನೆ ನಡೆಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಈಗಾಗಲೇ ದೇಗುಲದ ಶಿಲಾನ್ಯಾಸಕ್ಕೆ ಆಗಮಿಸುವಂತೆ ಆಮಂತ್ರಣವನ್ನು ಕಳುಹಿಸಿಕೊಡಲಾಗಿದೆ ಮತ್ತು ಇಂದಿನ ಸಭೆಯಲ್ಲಿ ದಿನಾಂಕವನ್ನು ಅಂತಿಮಗೊಳಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರು ಖಚಿತಪಡಿಸಿದ್ದಾರೆ.
“ನೃಪೇಂದ್ರ ಮಿಶ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ ದಿನಾಂಕವನ್ನು ಸಭೆಗೆ ತಿಳಿಸಲಿದ್ದಾರೆ. ಸದಸ್ಯರು ಈ ದಿನಾಂಕವನ್ನು ಅಂತಿಮಗೊಳಿಸುವ ನಿರೀಕ್ಷೆ ಇದೆ” ಎಂದು ಮೂಲಗಳು ತಿಳಿಸಿವೆ.
ರಾಮಮಂದಿರ ನಿರ್ಮಾಣ ಕಾರ್ಯದ ಆರಂಭದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಕೂಡ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಆಗಸ್ಟ್ ತಿಂಗಳಲ್ಲಿ ಮಂದಿರದ ನಿರ್ಮಾಣ ಕಾರ್ಯ ಆರಂಭವಾಗುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.