ನವದೆಹಲಿ: ದೇಶದ ಪ್ರಮುಖ ಎಂಜಿನಿಯರಿಂಗ್ ಶಿಕ್ಷಣ ನೀಡುವ ಸಂಸ್ಥೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪ್ರವೇಶ ಪಡೆಯಲು ಈ ಬಾರಿ 12ನೇ ತರಗತಿಯ ಅಂಕಗಳು ಪರಿಗಣನೆಯಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಐಐಟಿಯಲ್ಲಿ ವಿದ್ಯಾಭ್ಯಾಸ ನಡೆಸಲು ಅವಕಾಶ ಗಿಟ್ಟಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ 75% ಪಡೆದಿರಬೇಕು. ಅಥವಾ ಅರ್ಹತಾ ಪರೀಕ್ಷೆಗಳಲ್ಲಿ ಮೊದಲ 20ರಲ್ಲಿ ರ್ಯಾಂಕ್ ಪಡೆದಿರಬೇಕು. ಅದರೊಂದಿಗೆ ಜೆಇಇ ಯಲ್ಲಿ ತೇರ್ಗಡೆ ಹೊಂದಿರಬೇಕು. ಆದರೆ ಈ ಬಾರಿ ಪಿಯುಸಿ ಯಲ್ಲಿ 75% ಅಂಕ ಪಡೆದಿರಬೇಕು ಎಂಬ ಅಂಶವನ್ನು ತೆಗೆದು ಹಾಕಲಾಗಿದೆ ಎಂದು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.
ಕೊರೋನಾ ಸಂಕಷ್ಟದಿಂದಾಗಿ ಪರೀಕ್ಷೆಗಳ ಸಂದರ್ಭ ಅನೇಕ ಗೊಂದಲಗಳು ಎದುರಾಗಿತ್ತು. ಸಿಬಿಎಸ್ಇ, ಐಸಿಎಸ್ಇ, ಸ್ಟೇಟ್ ಬೋರ್ಡ್ ಗಳೂ ಕೊರೋನಾ ಕಾರಣದಿಂದ ಕೆಲವು ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇಂತಹ ಒಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದೂ ಪೋಖ್ರಿಯಾಲ್ ತಿಳಿಸಿದ್ದಾರೆ.
ಈ ಬಾರಿ ಐಐಟಿಯಲ್ಲಿ ಅವಕಾಶ ಗಿಟ್ಟಿಸಿಕೊಳ್ಳಬೇಕಾದರೆ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯನ್ನು ತೇರ್ಗಡೆಯಾಗಬೇಕು. ಜೊತೆಗೆ ಪಿಯುಸಿಯಲ್ಲಿ ಎಷ್ಟೇ ಅಂಕಗಳಿಸಿದ್ದರೂ ಅವರಿಗೆ ಐಐಟಿಗೆ ಅವಕಾಶ ನೀಡಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.