ನವದೆಹಲಿ: ಸೋಶಿಯಲ್ ಮೀಡಿಯಾಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದ್ದಾರೆ. ಟ್ವಿಟರ್ನಲ್ಲಿ ಅವರ ಹಿಂಬಾಲಕರ ಸಂಖ್ಯೆ 6 ಕೋಟಿಯನ್ನು ದಾಟಿದೆ. ಇದು ಅವರ ಏರುತ್ತಿರುವ ಜನಪ್ರಿಯತೆಗೆ ಮತ್ತೊಂದು ಸಾಕ್ಷಿಯಾಗಿದೆ.
ಪ್ರಧಾನಿ ಮೋದಿಯವರು ಮೊದಲ ಬಾರಿಗೆ ಟ್ವಿಟರ್ ಖಾತೆಯನ್ನು ತೆರೆದಿದ್ದು 2009ರಲ್ಲಿ. ಆ ವೇಳೆ ಅವರಿಗೆ 2,354 ಜನ ಹಿಂಬಾಲಕರು ಇದ್ದರು. 2019ರಲ್ಲಿ ಈ ಸಂಖ್ಯೆ 5 ಕೋಟಿಗೆ ಏರಿಕೆಯಾಯಿತು. ಇದೀಗ ಈ ಸಂಖ್ಯೆ 6 ಕೋಟಿಯನ್ನು ದಾಟಿ ಮುನ್ನಡೆಯುತ್ತಿದೆ.
ಟ್ವಿಟರ್ ಮಾತ್ರವಲ್ಲ, ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲೂ ಮೋದಿಯವರಿಗೆ ಅಪಾರ ಪ್ರಮಾಣದ ಬೆಂಬಲಿಗರು ಇದ್ದಾರೆ. ಇನ್ಸ್ಟಾಗ್ರಾಂನಲ್ಲಿ ಅವರ ಬೆಂಬಲಿಗರ ಸಂಖ್ಯೆ 4.5 ಕೋಟಿ ಆಗಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಸಕ್ರಿಯರಾಗಿರುವ ವಿಶ್ವ ನಾಯಕರಲ್ಲಿ ಮೋದಿ ಅಗ್ರ ಸ್ಥಾನದಲ್ಲಿ ಇದ್ದಾರೆ. ತಮ್ಮ ಆಡಳಿತದ ಪ್ರತಿಯೊಂದು ವಿಷಯಗಳನ್ನೂ ಅವರು ಈ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾರೆ.
ಇನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ವಿಷಯಕ್ಕೆ ಬಂದರೆ, 2015ರಲ್ಲಿ ಟ್ವಿಟರ್ ಖಾತೆಯನ್ನು ತೆರೆದಿರುವ ಅವರಿಗೆ ಪ್ರಸ್ತುತ ಇರುವ ಹಿಂಬಾಲಕರ ಸಂಖ್ಯೆ 1.5 ಕೋಟಿ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.