ನವದೆಹಲಿ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಎನ್ ಐ ವಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಅನ್ನು ರಾಷ್ಟ್ರ ರಾಜಧಾನಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಂಸ್ಥೆಯಲ್ಲಿ ಮಾನವನ ಮೇಲೆ ಪ್ರಯೋಗಿಸಲಾಗಿದೆ ಎಂದು ಏಮ್ಸ್ ನ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ಮಾಹಿತಿ ನೀಡಿದ್ದಾರೆ.
ಈ ಔಷಧಗಳ ಪ್ರಾಯೋಗಿಕ ಬಳಕೆಗಾಗಿ ಈಗಾಗಲೇ ದೇಶದ 12 ಸಂಸ್ಥೆಗಳನ್ನು ಗುರುತಿಸಲಾಗಿದ್ದು, ಎರಡು ಹಂತಗಳಲ್ಲಿ ಈ ಲಸಿಕೆಯನ್ನು ಪ್ರಯೋಗ ಮಾಡಲಾಗುವುದಾಗಿಯೂ ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಸ್ವ ಇಚ್ಛೆಯಿಂದ ಮುಂದಾಗಿರುವ 1800 ಜನರನ್ನು ಬಳಕೆ ಮಾಡಲಾಗುತ್ತದೆ ಎಂದೂ ರಣ್ ದೀಪ್ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ ಈ ಲಸಿಕೆಯನ್ನು 18-55 ವರ್ಷದೊಳಗಿನ ಜನರ ಮೇಲೆ ಪ್ರಯೋಗ ಮಾಡಲಾಗುತ್ತದೆ. ಇದಕ್ಕಾಗಿ 1125 ಮಾದರಿಗಳನ್ನು ಈಗಾಗಲೇ ಸಂಗ್ರಹಿಸಲಾಗಿದ್ದು, ಅವರಲ್ಲಿ 375 ಮಾದರಿಗಳ ಅಧ್ಯಯನವನ್ನು ಮೊದಲ ಹಂತದಲ್ಲಿ ಮಾಡಲಾಗುತ್ತದೆ ಎಂದೂ ತಿಳಿಸಿದ್ದಾರೆ. ಎರಡನೇಯ ಹಂತದಲ್ಲಿ 12-65 ವರ್ಷಗಳೊಳಗಿನ 750 ಜನರ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಿ ಅದರ ಸಾಧ್ಯತೆ ಬಾಧ್ಯತೆಗಳನ್ನು ಪರಿಶೀಲನೆ ನಡೆಸಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮತ್ತು ಎನ್ ಐ ವಿ ಸಹಯೋಗದೊಂದಿಗೆ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿ ಮಾಡಿರುವ ಕೊರೋನಾ ಲಸಿಕೆ ಕೋವ್ಯಾಕ್ಸಿನ್ ಭಾರತದ ಬಹುದೊಡ್ಡ ಸಾಧನೆಯಾಗಿದೆ ಎಂದೂ ರಣ್ ದೀಪ್ ತಿಳಿಸಿದ್ದಾರೆ. ಜೊತೆಗೆ ಇಡೀ ಜಗತ್ತಿಗೆ ಸಂಬಂಧಿಸಿದಂತೆ ಕೊರೋನಾ ಸೋಂಕಿನಿಂತ ಮೃತಪಟ್ಟವರ ಸಂಖ್ಯೆಯೂ ಭಾರತದಲ್ಲಿ ಕಡಿಮೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.