ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಸಮರ್ಥ ನಿರ್ವಹಣೆಗಾಗಿ, ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಕೋವಿಡ್ ಇಂಡಿಯಾ ಅಭಿಯಾನ ಮತ್ತು ಎಚ್ ಸಿ ಜೆ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಬೆಂಗಳೂರಿನಲ್ಲಿ ಮೊದಲ ಪ್ಲಾಸ್ಮಾ ಬ್ಯಾಂಕ್ ಅನ್ನು ಆರಂಭ ಮಾಡಿದೆ.
ಈ ಕೇಂದ್ರವನ್ನು ಹೆಚ್ ಸಿ ಜೆ ಆಸ್ಪತ್ರೆಯಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು ಉದ್ಘಾಟಿಸಿದರು.
ಕೊರೋನಾ ಚಿಕಿತ್ಸಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ಲಾಸ್ಮಾ ಥೆರಪಿ ಧನಾತ್ಮಕವಾಗಿ ಪರಿಣಾಮ ಬೀರುತ್ತದೆ. ಈ ವಿಚಾರವನ್ನು ಪ್ರಾಯೋಗಿಕ ಚಿಕಿತ್ಸೆಗಳ ಮೂಲಕ ಕಂಡುಕೊಳ್ಳಲಾಗಿದೆ. ತೀವ್ರ ಸ್ವರೂಪದ ಸಮಸ್ಯೆಗಳನ್ನು ಎದುರಿಸುತ್ತಿರುವ ಕೊರೋನಾ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ಹೆಚ್ಚು ಸೂಕ್ತವಾಗಿದ್ದು, ಕೊರೋನಾ ದಿಂದ ಗುಣಮುಖರಾದವರು ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಮಾ ದಾನಕ್ಕೆ ಮುಂದೆ ಬರುವಂತೆಯೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ಲಾಸ್ಮಾ ದಾನಕ್ಕೆ ಸಂಬಂಧಿಸಿದಂತೆ ಆನ್ಲೈನ್ ದಾಖಲಾತಿಯನ್ನೂ ಕೆಲ ದಿನಗಳ ಹಿಂದೆ ಆರಂಭಿಸಲಾಗಿದೆ. ಈ ವರೆಗೆ ಸೋಂಕಿನಿಂದ ಗುಣಮುಖರಾದ 10 ಮಂದಿ ಪ್ಲಾಸ್ಮಾ ಕಣಗಳ ದಾನಕ್ಕೆ ಮುಂದೆ ಬಂದಿದ್ದಾರೆ. ಹೆಚ್ಚೆಚ್ಚು ಮಂದಿ ಪ್ಲಾಸ್ಮಾ ಕಣಗಳನ್ನು ದಾನ ಮಾಡಲು ಮುಂದೆ ಬಂದ ಪಕ್ಷದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿರುವ ಮತ್ತಷ್ಟು ರೋಗಿಗಳು ಆರೋಗ್ಯ ಮರಳಿ ಪಡೆಯುವುದಕ್ಕೆ ಸಾಧ್ಯವಿದೆ ಎಂದೂ ವೈದ್ಯರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.