ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದ ರಾಮ್ಪುರ್ ಸೆಕ್ಟರ್ ನ ಲೈನ್ ಆಫ್ ಕಂಟ್ರೋಲ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿರುವ ಕಾರ್ಯಾಚರಣೆಯ ಸಂದರ್ಭ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಳ್ಳಲಾಗಿದೆ.
5 ಚೀನಾ ನಿರ್ಮಿತ ಪಿಸ್ತೂಲ್ ಗಳು, 24 ಗ್ರೆನೇಡ್ ಗಳು, ಒಂದು ಎಕೆ-47 ಗನ್ ಸೇರಿದಂತೆ ಇನ್ನಿತರ ಹಲವು ವಿಧದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿವೆ. ಲೈನ್ ಆಫ್ ಕಂಟ್ರೋಲ್ ನಲ್ಲಿ ಉಗ್ರರು ರಹಸ್ಯ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಗುಪ್ತಚರ ಇಲಾಖೆಗಳು ನೀಡಿದ ಖಚಿತ ಮಾಹಿತಿಯನ್ನು ಆಧರಿಸಿದಂತೆ ಈ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು ಎಂದು ಸೇನೆ ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿಯನ್ನು ಜುಲೈ 22 ರಂದೇ ಗುಪ್ತಚರ ಇಲಾಖೆ ಭಾರತೀಯ ಸೇನೆಗೆ ನೀಡಿದ್ದು, ಈ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು ಎಂದೂ ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ರಾಮ್ಪುರದ ಹತ್ಲಾಂಗ್ ಪ್ರದೇಶದ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನೆ ಕಾರ್ಯಾಚರಣೆಯನ್ನು ನಡೆಸಿದ್ದು, ಈ ಸಂದರ್ಭದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೊತೆಗೆ ಗುರುವಾರವೂ ಪಾಕಿಸ್ಥಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ಥಾನಿಗಳು ಭಾರತದೊಳಕ್ಕೆ ಅಕ್ರಮವಾಗಿ ನುಸುಳುವ ಪ್ರಯತ್ನವನ್ನೂ ಮಾಡುತ್ತಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದೂ ಭದ್ರತಾ ಪಡೆಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.