ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಸಿ, ಡಿ ಮತ್ತು ಅರ್ಚಕರಿಗೆ ಕೇಂದ್ರ ಸರ್ಕಾರದ ಜನಧನ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅವರನ್ನು ಯೋಜನೆಯಡಿ ನೋಂದಾವಣಿ ಮಾಡುವಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳ ಸಿಬ್ಬಂದಿಗಳು ಮತ್ತು ಅರ್ಚಕರನ್ನು ಗಮನದಲ್ಲಿಟ್ಟುಕೊಂಡು ಈ ಸೂಚನೆಯನ್ನು ನೀಡಿದ್ದಾರೆ. ಅನಿರೀಕ್ಷಿತವಾಗಿ ಅಪಾಯ, ಅಪಘಾತ ಸಂಭವಿಸಿದಲ್ಲಿ ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡಲು ಪೂರಕವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆಯೂ ಸಚಿವರು ಸೂಚಿಸಿದ್ದಾರೆ.
ಜನಧನ್ ಯೋಜನೆಯಡಿ ಮಾತ್ರವಲ್ಲದೇ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪಿಎಂ ಸುರಕ್ಷಾ ಜ್ಯೋತಿ ಬಿಮಾ ಯೋಜನೆ, ಭಾರತೀಯ ಸ್ಟೇಟ್ ಬ್ಯಾಂಕಿನ ಗ್ರೂಪ್ ಪರ್ಸನಲ್ ಆಕ್ಸಿಡೆಂಟ್ ವಿಮಾ ಯೋಜನೆಗಳಡಿ ಅರ್ಚಕರು, ಗ್ರೂಪ್ ಸಿ, ಡಿ ನೌಕರರನ್ನು ನೋಂದಾಯಿಸಲು ಕ್ರಮವಹಿಸುವಂತೆಯೂ ಪೂಜಾರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.