
ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ವರ್ಷ ಎಲ್ಲಾ ರೀತಿಯ ಕ್ರೀಡಾ ಸಮಾರಂಭಗಳು ಸ್ಥಗಿತಗೊಂಡಿವೆ. ಪ್ರತಿವರ್ಷ ನಡೆಯುವ ಐಪಿಎಲ್ ಕೂಡ ಇದಕ್ಕೆ ಹೊರತಾಗಿಲ್ಲ.
ವರದಿಗಳ ಪ್ರಕಾರ, ಐಪಿಎಲ್ ಈ ಬಾರಿ ನಡೆಯದೆ ಇರುವುದರಿಂದ ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯಾಗಿದೆ. ಕ್ರೀಡಾಂಗಣದಲ್ಲಿ ಜನಸಮೂಹವನ್ನು ಸೇರಿಸಿಕೊಂಡು ಐಪಿಎಲ್ ನಡೆಸುವುದು ಈ ಬಾರಿ ಸಾಧ್ಯವಿಲ್ಲ. ಹೀಗಾಗಿ ದೂರದ ಯುಎಇಯಲ್ಲಿ ಐಪಿಎಲ್ ನಡೆಸಲು ಯೋಜನೆ ರೂಪಿಸಲಾಗುತ್ತಿದೆ.
ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಅವರು ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಈ ಮಾಹಿತಿಯನ್ನು ಹೊರಹಾಕಿದ್ದಾರೆ.
ಸುಮಾರು 51 ದಿನಗಳ ಕಾಲ ಐಪಿಎಲ್ ಟೂರ್ನಿ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.
ಆದರೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ಬಿಸಿಸಿಐ ಆಡಳಿತ ಮಂಡಳಿ ತೆಗೆದುಕೊಳ್ಳಲಿದೆ, ಭಾರತ ಸರಕಾರದ ಅನುಮೋದನೆ ಕೂಡ ಇದಕ್ಕೆ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


