ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಮಾದರಿಗಳನ್ನು ಪರೀಕ್ಷೆ ನಡೆಸುವ ಸಾಮರ್ಥ್ಯವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏರುತ್ತಿರುವ ಪ್ರಕರಣಗಳನ್ನು ಕ್ಷಿಪ್ರಗತಿಯಲ್ಲಿ ಪತ್ತೆಹಚ್ಚಲು ಇದು ಅಗತ್ಯ ಕೂಡ ಆಗಿದೆ.
ವರದಿಗಳ ಪ್ರಕಾರ, ಇದೀಗ ಒಂದೇ ದಿನದಲ್ಲಿ ಸುಮಾರು 5ಲಕ್ಷ ಕೋರೋನಾ ಮಾದರಿಗಳನ್ನು ಪರೀಕ್ಷೆ ನಡೆಸುವ ಮೂಲಕ ಭಾರತವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ.
ಇಂದು ಬೆಳಗ್ಗೆ ಅಂತ್ಯವಾಗುವಂತೆ ಕಳೆದ 24 ಗಂಟೆಗಳಲ್ಲಿ ಭಾರತವು 5 ಲಕ್ಷದ 15 ಸಾವಿರದ 472 ಕೊರೋನಾ ಮಾದರಿಗಳನ್ನು ಪರೀಕ್ಷೆ ನಡೆಸಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.
ಇದುವರೆಗೆ ದೇಶದಲ್ಲಿ ಒಟ್ಟು 1 ಕೋಟಿ 68 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ.
ಆರಂಭದಲ್ಲಿ ದಿನಕ್ಕೆ ಕೇವಲ 100 ಪರೀಕ್ಷೆಯಿಂದ ಆರಂಭವಾದ ಈ ಕಾರ್ಯ, ಇದೀಗ ದಿನಕ್ಕೆ 5 ಲಕ್ಷದವರೆಗೆ ಏರಿರುವುದು ನಿಜಕ್ಕೂ ಗಮನಾರ್ಹ ಸಾಧನೆಯಾಗಿದೆ. ಸಂಶೋಧನಾ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳು, ಪರೀಕ್ಷಾ ಪ್ರಯೋಗಾಲಯಗಳು, ಸಚಿವಾಲಯಗಳು, ವಿಮಾನಯಾನಗಳು ಮತ್ತು ಅಂಚೆ ಸೇವೆಗಳು ಈ ಕಾರ್ಯಕ್ಕೆ ಗಮನಾರ್ಹ ಕೊಡುಗೆಯನ್ನು ನೀಡಿದೆ.
ಪರೀಕ್ಷೆ ನಡೆಸುವ ಪ್ರಯೋಗಾಲಯಗಳ ಸಂಖ್ಯೆ ಕೂಡ ಭಾರತದಲ್ಲಿ ಹೆಚ್ಚಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.