ಮಂಗಳೂರು: ಈ ವರೆಗೆ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಿಂಧು ಬಿ. ರೂಪೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಸರ್ಕಾರ, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ರಾಜೇಂದ್ರ ಕೆ.ವಿ. ಅವರನ್ನು ನೇಮಕ ಮಾಡಿದೆ.
ಸಿಂಧು ರೂಪೇಶ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ-ಆಡಳಿತ ವಿಭಾಗದ ನಿರ್ದೇಶಕಿಯನ್ನಾಗಿ ಸರ್ಕಾರ ನಿಯೋಜಿಸಿದೆ.
ಡಾ. ರಾಜೇಂದ್ರ ಕೆ. ವಿ. ಅವರು ಈ ವರೆಗೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಇದೀಗ ಅವರನ್ನು ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ.ರಾಜೇಂದ್ರ ಅವರು ದಾವಣಗೆರೆಯ ಬಾಪುಜಿ ವೈದ್ಯಕೀಯ ಕಾಲೇಜಿನಲ್ಲಿ ಪದವಿ ಪಡೆದ ವೈದ್ಯ. ಅವರು 2013 ರಲ್ಲಿ ನಾಗರಿಕ ಸೇವೆಗಳ ಪರೀಕ್ಷೆಯಲ್ಲಿ 32 ನೇ ರ್ಯಾಂಕ್ ಪಡೆದಿದ್ದರು.
ದಕ್ಷಿಣ ಕನ್ನಡದಲ್ಲೂ ಕೊರೋನಾವೈರಸ್ ಸಾಂಕ್ರಾಮಿಕ ರೋಗ ತೀವ್ರಗತಿಯಲ್ಲಿ ಏರುತ್ತಿದ್ದು, ಈ ಹಿನ್ನಲೆಯಲ್ಲಿ ನೂತನ ಜಿಲ್ಲಾಧಿಕಾರಿಯವರ ಎದುರು ಹೆಚ್ಚಿನ ಸವಾಲುಗಳು ಇವೆ. ಸಮರ್ಪಕವಾದ ಚಿಕಿತ್ಸೆ, ಸಾಂಕ್ರಾಮಿಕ ಹರಡುವಿಕೆಯನ್ನು ಕುಗ್ಗಿಸುವ ಮಹತ್ತರವಾದ ಜವಾಬ್ದಾರಿ ಅವರ ಮೇಲೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.