ನವದೆಹಲಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. 34 ವರ್ಷಗಳ ಬಳಿಕ ಮೊದಲ ಬಾರಿಗೆ ಭಾರತ ಹೊಸ ಶಿಕ್ಷಣ ನೀತಿಯನ್ನು ಪಡೆದುಕೊಂಡಿದೆ. ಸುಮಾರು ಆರು ವರ್ಷಗಳ ವಿಳಂಬದ ಬಳಿಕ ಇದು ಅನುಮೋದನೆಯನ್ನು ಪಡೆದುಕೊಂಡಿದೆ.
ವರದಿಗಳ ಪ್ರಕಾರ, ಪ್ರಸ್ತುತ ಉದ್ಯೋಗದ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಕ್ಷೇತ್ರಕ್ಕೆ ರೂಪುರೇಷೆಗಳನ್ನು ಈ ನೀತಿ ನೀಡಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
1968 ಮತ್ತು 1986 ರಲ್ಲಿ ಬಂದ ನೀತಿಗಳ ನಂತರ ಇದು ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ ಆಗಿದೆ. ಸರ್ಕಾರವು 1986ರ ನೀತಿಗೆ 1992ರಲ್ಲಿ ತಿದ್ದುಪಡಿ ಮಾಡಿದರೂ, ಅದು ಹೆಚ್ಚಾಗಿ ಒಂದೇ ಆಗಿತ್ತು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿವರಗಳು ಸಂಜೆ ಬಹಿರಂಗಗೊಳ್ಳುವ ನಿರೀಕ್ಷೆಯಿದೆ. ಇದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಹೆಸರನ್ನು ಶಿಕ್ಷಣ ಸಚಿವಾಲಯಕ್ಕೆ ಬದಲಾಯಿಸುವ, ಬಹು-ಶಿಸ್ತಿನ ಶಿಕ್ಷಣವನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಸರ್ಕಾರವು ಉನ್ನತ ಶಿಕ್ಷಣ ಖರ್ಚುಗಾಗಿ ನಿಯಮಗಳನ್ನು ರೂಪಿಸಿದೆ ಎಂದೂ ಹೇಳಲಾಗಿದೆ.
ಕರಡು ನೀತಿಯು ಉನ್ನತ ಶಿಕ್ಷಣ ಸಂಸ್ಥೆಗೆ ಹೆಚ್ಚಿನ ಸ್ವಾಯತ್ತತೆಯನ್ನು ನೀಡುವ ಭರವಸೆ ನೀಡಿತ್ತು. ಬಾಲ್ಯ ಮತ್ತು ಪ್ರಾಥಮಿಕ ಶಿಕ್ಷಣದ ಸಮಸ್ಯೆಗಳಿಗೆ ಕರಡು ಪರಿಹಾರಗಳನ್ನು ಒಳಗೊಂಡಿತ್ತು. ಭಾಷೆಯ ಮೂಲಭೂತ ತಿಳುವಳಿಕೆ ಮತ್ತು ಗಣಿತದ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸುವುದು ಗುಣಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಸೂಚಿಸಿತ್ತು. ಅಲ್ಲದೆ, ಹೊಸ ನೀತಿಯು ಉನ್ನತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳಿಗೆ ವೈವಿಧ್ಯತೆ ಮತ್ತು ಸಮಗ್ರ ಶಿಕ್ಷಣ ರಚನೆಯನ್ನು ಉತ್ತೇಜಿಸುತ್ತದೆ ಮತ್ತು ಸಂಶೋಧನೆ ಮತ್ತು ಅಭಿವೃದ್ಧಿ ಅನ್ನು ಉತ್ತೇಜಿಸಲು ಸಂಶೋಧನಾ ನಿಧಿಯನ್ನು ಸ್ಥಾಪಿಸುವ ಭರವಸೆಯನ್ನು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.