ನವದೆಹಲಿ: ಕೋವಿಡ್-19 ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಭಾರತಕ್ಕೆ ಫ್ರಾನ್ಸ್ ಸರ್ಕಾರ 120 ವೆಂಟಿಲೇಟರ್ಗಳನ್ನು ಮತ್ತು 50 ಸಾವಿರ ಕೊರೋನಾ ಟೆಸ್ಟಿಂಗ್ ಕಿಟ್ ಗಳನ್ನು ಕೊಡುಗೆಯಾಗಿ ನೀಡಿದ್ದು, ಈ ಮಾರಕ ಪರಿಸ್ಥಿತಿಯಲ್ಲಿ ಉಭಯ ದೇಶಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುವುದಕ್ಕೆ ಕಾರಣವಾಗಿದೆ.
ಫ್ರಾನ್ಸ್ ದೇಶ ಭಾರತದ ಪ್ರಮುಖ ಕಾರ್ಯತಂತ್ರ ಪಾಲುದಾರ ದೇಶಗಳಲ್ಲಿ ಒಂದಾಗಿದೆ. ಉಭಯ ದೇಶಗಳ ಸಂಬಂಧವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಫ್ರಾನ್ಸ್ ಈ ಉಡುಗೊರೆಯನ್ನು ಭಾರತಕ್ಕೆ ನೀಡಿದೆ. ಜೊತೆಗೆ ಸಾಂಕ್ರಾಮಿಕ ಸಮಯದಲ್ಲಿ ಭಾರತವೂ ಫ್ರಾನ್ಸ್ಗೆ ಅಗತ್ಯ ಔಷಧಗಳನ್ನು ಪೂರೈಸಿದ್ದು, ಎರಡೂ ದೇಶಗಳು ಸಂಕಷ್ಟದ ಸಮಯದಲ್ಲಿ ಪರಸ್ಪರ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸುತ್ತಿರುವುದಾಗಿ ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಫ್ರಾನ್ಸ್ನ ಕೊಡುಗೆ ವೆಂಟಿಲೇಟರ್ ಮತ್ತು ಪರೀಕ್ಷಾ ಕಿಟ್ಗಳನ್ನು ಭಾರತದಲ್ಲಿರುವ ಫ್ರಾನ್ಸ್ನಲ್ಲಿನ ರಾಯಭಾರಿ ಎಮ್ಯಾನ್ಯುಯೆಲ್ ಲೆನೈನ್ ಅವರು ಭಾರತೀಯ ರೆಡ್ಕ್ರಾಸ್ ಸೊಸೈಟಿ ಮತ್ತು ಐಸಿಎಂಆರ್ ಅಧಿಕಾರಿಗಳಿಗೆ ಹಸ್ತಾಂತರಿಸಿ, ಕೊರೋನಾ ಸಾಂಕ್ರಾಮಿಕ ರೋಗದ ನಿರ್ಮೂಲನೆಗೆ ಎರಡೂ ರಾಷ್ಟ್ರಗಳು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಭಾರತದೊಂದಿಗೆ ಸಹಕರಿಸಲು ಫ್ರಾನ್ಸ್ ಸದಾ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.