ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ ಸಂಬಂಧಿಸಿದಂತೆ ಪ್ರಸಕ್ತ ವರ್ಷದಿಂದ ರಾಜ್ಯ ಸರ್ಕಾರ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಎಂಬ ಪ್ರಶಸ್ತಿಯನ್ನು ನೀಡಲು ಮುಂದಾಗಿದೆ. ರಾಜ್ಯ ಮಟ್ಟದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಉತ್ತಮ ಆಡಳಿತ ವ್ಯವಸ್ಥೆ ಮತ್ತು ಗುಣಮಟ್ಟದ ಶಿಕ್ಷಣದ ಆಧಾರದಲ್ಲಿ ಈ ಬಹುಮಾನವನ್ನು ನೀಡಲಾಗುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ನಿನ್ನೆ ನಡೆದ ವೆಬಿನಾರ್ ಸಂವಾದವೊಂದರಲ್ಲಿ ಭಾಗಿಯಾದ ಸಚಿವರು, ಈ ಕುರಿತಂತೆ ಮಾಹಿತಿ ನೀಡಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಮುನ್ನಡೆಯುತ್ತಿರುವ ಶಾಲೆಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಇಂತಹ ಸ್ಪರ್ಧೆ ನಡೆದರೆ ಅದು ಶಾಲೆಗಳ ಅಭಿವೃದ್ಧಿಗೆ ಪೂರಕವಾಗುತ್ತದೆ. ಈ ನಿಟ್ಟಿನಲ್ಲಿ ಇಂತಹ ಪ್ರಶಸ್ತಿ ನೀಡಲು ಸರ್ಕಾರ ಮುಂದಾಗಿದೆ ಎಂದೂ ಅವರು ಹೇಳಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾನ್ವಿತ ಅಧ್ಯಾಪಕರಿರುತ್ತಾರೆ. ಅವರನ್ನು ಗುರುತಿಸುವ ಕೆಲಸವಾಗಬೇಕು. ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರ ನಡುವೆ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿಯೂ ಕಾರ್ಯ ನಿರ್ವಹಿಸಬೇಕಾಗಿದೆ. ಇದರಿಂದ ಮಾತ್ರವೇ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವುದು ಸಾಧ್ಯ. ಶಾಲೆಯ ಸರ್ವತೋಮುಖ ಬೆಳವಣಿಗೆಯನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಈ ಪ್ರಶಸ್ತಿ ನೀಡುವುದಾಗಿಯೂ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.