ಅಯೋಧ್ಯೆ: ಆಗಸ್ಟ್ 5ರಂದು ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಮಾಯಣ ಮತ್ತು ರಾಮ ಮಂದಿರದ ಚಿತ್ರಗಳಿರುವ ಎರಡು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಅಯೋಧ್ಯೆ ಸಂಶೋಧನಾ ಸಂಸ್ಥೆಯ ನಿರ್ದೇಶಕ ವೈ. ಪಿ. ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ ಭೂಮಿ ಪೂಜೆಯಂದು ನರೇಂದ್ರ ಮೋದಿ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಒಂದು ಅಂಚೆ ಚೀಟಿಯಲ್ಲಿ ರಾಮ ಮಂದಿರದ ಸಾಂಕೇತಿಕ ಚಿತ್ರವಿದ್ದರೆ, ಇನ್ನೊಂದು ಅಂಚೆ ಚೀಟಿಯಲ್ಲಿ ರಾಮನ ಮಹತ್ವಗಳನ್ನು ಚಿತ್ರಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿಯ ಹಿರಿಯ ನಾಯಕ ಅಡ್ವಾಣಿ, ಎಂ. ಎಂ. ಜೋಷಿ, ಉಮಾ ಭಾರತಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣ್ಯರು, ರಾಜಕೀಯ ನೇತಾರರು, ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ. ಆರ್ಎಸ್ಎಸ್ ನಾಯಕ ಮೋಹನ್ ಭಾಗವತ್ ಅವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ.
ಈ ಸಮಾರಂಭಕ್ಕೆ ಅಪಾಯ ತಂದೊಡ್ಡುವ ನಿಟ್ಟಿನಲ್ಲಿ ಉಗ್ರಗಾಮಿ ಸಂಘಟನೆಗಳೂ ಹುನ್ನಾರ ನಡೆಸುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಅಪಾಯ ಸಂಭವಿಸದಂತೆ ಕಟ್ಟೆಚ್ಚರ ವಹಿಸಲಾಗಿದೆ. ಉಗ್ರವಾದಿಗಳು ದಾಳಿ ನಡೆಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಭದ್ರತಾ ವ್ಯವಸ್ಥೆಗಳನ್ನೂ ಕೈಗೊಳ್ಳಲಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.