ಬೆಂಗಳೂರು: ಕೊರೋನಾ ಸೋಂಕು ತಡೆಗೆ ಈ ಹಿಂದೆ ಹಾಕಲಾಗಿದ್ದ ಲಾಕ್ಡೌನ್ ತೆರವಿನ ಮೂರನೇ ಹಂತದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಬೆನ್ನಲ್ಲೇ, ರಾಜ್ಯ ಸರ್ಕಾರವೂ ಅನ್ಲಾಕ್-3 ನಿಯಮಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಈ ಹೊಸ ನಿಯಮ ಆಗಸ್ಟ್1 ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ ಎಂದೂ ಸರ್ಕಾರ ಮಾಹಿತಿ ನೀಡಿದೆ. ಇಂದು ರಾತ್ರಿಯಿಂದಲೇ ರಾತ್ರಿ ಕರ್ಫ್ಯೂ ಮುಕ್ತಾಯವಾಗಲಿದ್ದು, ಭಾನುವಾರವೂ ಲಾಕ್ಡೌನ್ ಕ್ರಮ ಜಾರಿಯಲ್ಲಿರುವುದಿಲ್ಲ ಎಂದು ಮಾಹಿತಿ ನೀಡಿದೆ.
ಜಿಮ್ ಮತ್ತು ಯೋಗ ಕೇಂದ್ರಗಳನ್ನು ಪುನರಾರಂಭಗೊಳಿಸುವುದಕ್ಕೆ ಅನುಮತಿ ನೀಡಲಾಗಿದ್ದು, ಆರೋಗ್ಯ ಇಲಾಖೆಯ ಸೂಚನೆಗಳನ್ನು ಕಡೆಗಣಿಸಬಾರದು ಎಂದೂ ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಈ ವರೆಗೆ ಅಂತರರಾಜ್ಯ ಸಂಚಾರಕ್ಕೂ ಹಲವಾರು ನಿಯಮಗಳನ್ನು ರೂಪಿಸಿದ್ದ ರಾಜ್ಯ ಸರ್ಕಾರ, ಸದ್ಯ ಅಂತರರಾಜ್ಯ ಪ್ರಯಾಣಕ್ಕೂ ಸಂಪೂರ್ಣ ಅನುಮತಿಯನ್ನು ನೀಡಿ ಆದೇಶ ಹೊರಡಿಸಿದೆ. ಇತರ ರಾಜ್ಯಗಳಿಂದ ಕರ್ನಾಟಕದೊಳಕ್ಕೆ ಬರುವ ಪ್ರಯಾಣಿಕರು ಆರೋಗ್ಯ ಇಲಾಖೆಯ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಈ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.