ಚಂಢೀಘಡ: ಅಂತರರಾಷ್ಟ್ರೀಯ ಕುಸ್ತಿ ಪಟು ಬಬಿತಾ ಫೊಗಟ್ ಮತ್ತು ಕಬಡ್ಡಿ ಆಟಗಾರ್ತಿ ಕವಿತಾ ದೇವಿ ಅವರನ್ನು ಹರಿಯಾಣ ಸರ್ಕಾರವು ಕ್ರೀಡಾ ಮತ್ತು ಯುವ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
ಈ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಈ ಕುರಿತಂತೆ 2 ಪ್ರತ್ಯೇಕ ಆದೇಶಗಳನ್ನು ಹೊರಡಿಸಿದೆ. ಈ ಇಬ್ಬರ ಕ್ರೀಡಾ ಸಾಧನೆಯನ್ನು ಗುರುತಿಸಿ ಇವರಿಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿ, 2018 ರ ನೇಮಕಾತಿ ನಿಯಮಗಳ ಅಡಿಯಲ್ಲಿ ಇವರನ್ನು ಆಯ್ಕೆ ಮಾಡಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಇಬ್ಬರಿಗೂ ಒಂದು ತಿಂಗಳೊಳಗಾಗಿ ಇಲಾಖೆಗೆ ಅಧಿಕೃತವಾಗಿ ಸೇರಿಕೊಳ್ಳುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.
ಬಬಿತಾ ಅವರು ಪ್ರಖ್ಯಾತ ಕುಸ್ತಿ ತರಬೇತುದಾರ ಮಹಾವೀರ ಫೋಗಟ್ ಅವರ ಪುತ್ರಿ.
ಈ ಸಂದರ್ಭದಲ್ಲಿ ಮಾತನಾಡಿರುವ ಬಬಿತಾ, ಈ ಅವಕಾಶವನ್ನು ಸರ್ಕಾರ ನನಗೆ ನೀಡಿರುವುದನ್ನು ಜವಾಬ್ದಾರಿ ಎಂದು ಪರಿಗಣಿಸಿ ಕೆಲಸ ಮಾಡುವುದಾಗಿ ಹೇಳಿದ್ದಾರೆ. ತಾನೂ ಓರ್ವ ಕ್ರೀಡಾಪಟುವಾಗಿರುವುದರಿಂದ, ಕ್ರೀಡಾಳುಗಳಿಗೆ ಅಗತ್ಯವೆನಿಸುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.
ಕವಿತಾ ಅವರು 2014ರಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಭಾರತೀಯ ಕಬಡ್ಡಿ ಆಟಗಾರರ ತಂಡದಲ್ಲಿ ಸದಸ್ಯರಾಗಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.