ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಪ್ರಸರಣದ ವೇಗ ತೀವ್ರವಾಗುತ್ತಿದ್ದರೂ, ಚೇತರಿಸಿಕೊಳ್ಳುತ್ತಿರುವ ರೋಗಿಗಳ ಸಂಖ್ಯೆಯೂ ದಿನೇ ದಿನೇ ಹೆಚ್ಚುತ್ತಲೇ ಇರುವುದಾಗಿ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.
ಕೊರೋನಾಗೆ ಸಂಬಂಧಿಸಿದಂತೆ ವಿವಿಧ ಸಚಿವರ ಜೊತಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ 21 ದಿನಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ದೇಶದಲ್ಲಿ ಚೇತರಿಕೆಯ ಪ್ರಮಾಣ 64.54% ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಕೊರೋನಾ ಸೋಂಕಿತರಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕಾರಣದಿಂದಲೇ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದೂ ಅವರು ತಿಳಿಸಿದ್ದಾರೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 55,079 ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 779 ಸೋಂಕಿತರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 16,38,871ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 35,747ರಷ್ಟಾಗಿದೆ ಎಂದೂ ಕೇಂದ್ರ ಆರೋಗ್ಯ ಸಚಿವಾಲಯದ ವರದಿಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.