ನವದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಸ್ಪರ್ಧೆಯ ಕೊನೆಯ ಸುತ್ತು ನಾಳೆ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.
ಪ್ರಸ್ತುತ ಸಂದರ್ಭದಲ್ಲಿ ಜನರು ಎದುರಿಸಬೇಕಾದ ಸಮಸ್ಯೆಗಳನ್ನಿಟ್ಟುಕೊಂಡು, ಅವುಗಳಿಗೆ ಪರಿಹಾರವಾಗಬಲ್ಲ ತಂತ್ರಜ್ಞಾನ, ಅಪ್ಲಿಕೇಶನ್ಗಳ ಆವಿಷ್ಕಾರಕ್ಕೆ ಸಂಬಂಧಿಸಿದಂತೆ ಈ ಸ್ಪರ್ಧೆಗಳು ನಡೆದಿದ್ದು, ಇದರ ಅಂತಿಮ ಸುತ್ತು ನಾಳೆ ನಡೆಯಲಿದೆ. ಈ ಸಂದರ್ಭದಲ್ಲಿ ಭಾರತದ ಭವಿಷ್ಯವಾದ ವಿದ್ಯಾರ್ಥಿಗಳ ಜೊತೆಗೆ ಮೋದಿ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸ್ಪರ್ಧೆಯ ಮೊದಲ ಆವೃತ್ತಿ 2017 ರಲ್ಲಿ ನಡೆದಿದ್ದು ಸುಮಾರು 42,000 ವಿದ್ಯಾರ್ಥಿಗಳು ಇದರಲ್ಲಿ ಭಾಗಿಗಳಾಗಿದ್ದರು. 2018 ರಲ್ಲಿ ಒಂದು ಲಕ್ಷ, 2019 ರಲ್ಲಿ ಎರಡು ಲಕ್ಷ ಮತ್ತು 2020 ರ ಮೊದಲ ಸುತ್ತಿನ ಸ್ಪರ್ಧೆಯಲ್ಲಿ ಒಟ್ಟು 4.5 ಲಕ್ಷ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದಾಗಿ ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.