ನವದೆಹಲಿ: ಕೊರೋನಾ ಸೋಂಕು ಹರಡುವಿಕೆ ತಡೆಗಟ್ಟುವ ಸಲುವಾಗಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿಮಾನ ಹಾರಾಟವನ್ನು ಕೇಂದ್ರ ಸರ್ಕಾರ ನಿಷೇಧಿಸಿತ್ತು. ಅದಾದ ಬಳಿಕ ಭಾರತದೊಳಗೆ ವಿಮಾನ ಹಾರಾಟ ಆರಂಭವಾಗಿತ್ತಾದರೂ, ಅಂತರರಾಷ್ಟ್ರೀಯ ವಿಮಾನ ಸೇವೆ ಇನ್ನೂ ಆರಂಭಗೊಂಡಿಲ್ಲ. ಈ ಕುರಿತಂತೆ ಮಾಹಿತಿ ನೀಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಆಗಸ್ಟ್ 31 ರವರೆಗೆ ಅಂತರರಾಷ್ಟ್ರೀಯ ವಿಮಾನ ಸೇವೆಗಳನ್ನು ಆರಂಭ ಮಾಡುವುದಿಲ್ಲ ಎಂದು ತಿಳಿಸಿದೆ.
ಸರಕು ಸಾಗಾಟಕ್ಕೆ ಬಳಸುವ ವಿಮಾನ ಸೇವೆ ಮತ್ತು ಸರ್ಕಾರದಿಂದ ವಿಶೇಷ ಅನುಮತಿ ಪಡೆದು ಸೇವೆ ನೀಡುತ್ತಿರುವ ವಿಮಾನಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದೂ ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಜೊತೆಗೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ವಿಮಾನ ಸೇವೆಯನ್ನು ಸಂಬಂಧಪಟ್ಟ ಆಡಳಿತ ವ್ಯವಸ್ಥೆ ಅನುಮತಿಸಬಹುದಾಗಿದೆ ಎಂದೂ ಈ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಮೇ 25 ರಂದು ದೇಶೀಯ ವಿಮಾನಯಾನ ಸೇವೆಯನ್ನು ಆರಂಭಗೊಳಿಸಲಾಗಿದ್ದು, ಆಗಸ್ಟ್ ಕೊನೆಯವರೆಗೂ ಅಂತರರಾಷ್ಟ್ರೀಯ ವಿಮಾನ ಸೇವೆಯನ್ನು ಆರಂಭ ಮಾಡುವುದಿಲ್ಲ ಎಂಬುದಾಗಿ ಸಚಿವಾಲಯ ಇದೀಗ ಸ್ಪಷ್ಟವಾಗಿ ತಿಳಿಸಿದೆ. ದೇಶದಿಂದ ಹೋಗುವ ಅಥವಾ ಬರುವ ವಾಣಿಜ್ಯ ಪ್ರಯಾಣಿಕ ಸೇವೆಗಳಿಗೆ ಸಂಬಂಧಿಸಿದಂತೆ ಆಗಸ್ಟ್ 31 ರ ವರೆಗೂ ನಿಷೇಧ ಮುಂದುವರೆಯುವುದಾಗಿ ಇಲಾಖೆ ಮಾಹಿತಿ ನೀಡಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.