ಬೆಂಗಳೂರು: ಬಿಎಂಸಿಆರ್ಐ, ಲೇಡಿ ಕರ್ಜನ್ ಮತ್ತು ಬೌರಿಂಗ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುವ ಖಾಯಂ ಶುಶ್ರೂಷಕ ಸಂಘದ ಹಲವು ಬೇಡಿಕೆಗಳನ್ನು ಈಡೇರಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಜೊತೆಗೆ ಚರ್ಚೆ ನಡೆಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ದಾದಿಯರ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗುವುದಾಗಿಯೂ ಸುಧಾಕರ್ ತಿಳಿಸಿದ್ದಾರೆ. ಆದಷ್ಟು ಶೀಘ್ರದಲ್ಲೇ ನರ್ಸ್ಗಳ ಬೇಡಿಕೆ ಈಡೇರಿಸಲು ಪೂರಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಜೊತೆಗೆ ಎಲ್ಲಾ ದಾದಿಯರೂ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸ್ಟಾಫ್ ನರ್ಸ್ಗಳ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಆಸ್ಪತ್ರೆಯ ಸಿಬ್ಬಂದಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಲಾಗುತ್ತದೆ. ಸಮಸ್ಯೆಗಳಿಗೆ ಸಂಬಂಧಿಸಿದಂತೆ ಎಲ್ಲಾ ವಿಧಗಳಲ್ಲಿಯೂ ಮಾಹಿತಿ ಸಂಗ್ರಹಿಸಿ ಬಳಿಕ ಅದನ್ನು ಪರಿಹರಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.