ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆಸಲು ಕ್ರೀಡಾ ಸಚಿವಾಲಯ ಅನುಮತಿ ನೀಡಿದೆ ಮತ್ತು ಕೇಂದ್ರ ಗೃಹ ಸಚಿವಾಲಯದ ಅಂತಿಮ ಅನುಮತಿ ಶೀಘ್ರದಲ್ಲೇ ಸಿಗಲಿದೆ ಎಂದು ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ ಪ್ರಕಟಿಸಲಾಗಿದೆ.
ವರದಿಗಳ ಪ್ರಕಾರ, ಸೆಪ್ಟೆಂಬರ್ 19 ರಿಂದ ನವೆಂಬರ್ 10 ರವರೆಗೆ ದುಬೈ, ಅಬುಧಾಬಿ ಮತ್ತು ಶಾರ್ಜಾದಲ್ಲಿ ಪಂದ್ಯಾವಳಿಗಳನ್ನು ನಡೆಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.
“ಐಪಿಎಲ್ ಭಾರತದಲ್ಲಿ ನಡೆಯಬೇಕೆಂದು ಎಲ್ಲರೂ ಬಯಸಿದ್ದರು, ಮತ್ತು ಇದಕ್ಕಾಗಿ ನಾವು ಬಯೋ ಸೆಕ್ಯೂರ್ ಬಬಲ್ ಅನ್ನು ರಚಿಸುವ ಮೂಲಕ ದೇಶದಲ್ಲೇ ಐಪಿಎಲ್ ನಡೆಸಲು ಬಯಸಿದ್ದೆವು. ಆದರೆ ಅದನ್ನು ಸುರಕ್ಷಿತವೆಂದು ಪರಿಗಣಿಸಲಾಗಿಲ್ಲ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮುಂಬೈ-ಪುಣೆಯ ಮೂರು-ನಾಲ್ಕು ಸ್ಥಳಗಳಲ್ಲಿ ಮತ್ತು ಗುಜರಾತ್ನ ಮೂರು ಸ್ಥಳಗಳಾದ ರಾಜ್ಕೋಟ್, ಅಹಮದಾಬಾದ್ ಮತ್ತು ವಡೋದರಾದಲ್ಲಿ ಐಪಿಎಲ್ ನಡೆಸಲು ಯೋಜನೆಯನ್ನು ರೂಪಿಸಲಾಗಿತ್ತು. ಈ ಪ್ರಸ್ತಾಪವನ್ನು ಸರ್ಕಾರಕ್ಕೆ ಕಳುಹಿಸಲಾಗಿತ್ತು, ಆದರೆ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ ಆರೋಗ್ಯ ಬಿಕ್ಕಟ್ಟು ಕಂಡುಬಂದ ಹಿನ್ನೆಲೆಯಲ್ಲಿ ಅದಕ್ಕೆ ಅನುಮತಿಯನ್ನು ನೀಡಲಾಗಿಲ್ಲ.
ಪ್ರಸಾರಕರ ಅಗತ್ಯಗಳಿಗೆ ಅನುಗುಣವಾಗಿ ಪಂದ್ಯಗಳು ಆ ದೇಶದಲ್ಲಿ ಸಂಜೆ 6 ಗಂಟೆಗೆ ( ಭಾರತೀಯ ಕಾಲಮಾನ ಸಂಜೆ 7.30 ಕ್ಕೆ ಐಎಸ್ಟಿ) ರಾತ್ರಿ ವೇಳೆ ಪಂದ್ಯಗಳು ಪ್ರಾರಂಭವಾಗಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.