ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ವರೆಗೆ ದೇಶದಲ್ಲಿ 2 ಕೋಟಿಗೂ ಅಧಿಕ ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಭಾರತದಲ್ಲಿ ಆಗಸ್ಟ್ 2 ರ ವರೆಗೂ 2,02,02,858 ಜನರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಆಗಸ್ಟ್ 2 ರಂದೇ ಕೇವಲ 24 ಗಂಟೆಗಳಲ್ಲಿ 3,81,027 ಜನರ ಮಾದರಿಗಳನ್ನು ಕೊರೋನಾ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದೂ ಸಂಸ್ಥೆ ಹೇಳಿದೆ.
52,972 ಜನರಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ ಎಂದು ಈ ವರದಿ ಮಾಹಿತಿ ನೀಡಿದೆ. ನಿನ್ನೆ ಒಂದೇ ದಿನದಲ್ಲಿ 771 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಆ ಮೂಲಕ ಈ ವರೆಗೂ ಕೋವಿಡ್ನಿಂದಾಗಿ ಮೃತಪಟ್ಟವರ ಸಂಖ್ಯೆ 38,135ಕ್ಕೆ ಹೆಚ್ಚಳವಾಗಿದೆ ಎಂದು ತಿಳಿಸಿದೆ.
ಆ ಮೂಲಕ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 18,03,669ಕ್ಕೆ ಏರಿಕೆಯಾಗಿದೆ. ಈ ಪೈಕಿ 11,86,203 ಮಂದಿ ಚೇತರಿಸಿಕೊಂಡಿದ್ದಾರೆ. 5,79,357 ಸಕ್ರಿಯ ಪ್ರಕರಣಗಳನ್ನು ಹೊಂದಿರುವ ಜನರು ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ಐಸಿಎಂಆರ್ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.