ಶ್ರೀನಗರ: ಕಳೆದ ಬಾರಿ 2019 ರ ಆಗಸ್ಟ್ 5 ರಂದು ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆರ್ಟಿಕಲ್ 370ಯನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಡಿಸಿತ್ತು, ನಾಳೆಗೆ ಈ ಐತಿಹಾಸಿಕ ನಿರ್ಧಾರಕ್ಕೆ ಒಂದು ವರ್ಷವಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಮುನ್ನೆಚ್ಚರಿಕೆಯಾಗಿ ಶ್ರೀನಗರದಲ್ಲಿ ಕರ್ಫ್ಯೂ ಹೇರಲಾಗಿದೆ.
ಕಳೆದ ವರ್ಷ ಕೇಂದ್ರ ಸರ್ಕಾರ ತೆಗೆದುಕೊಂಡ ಈ ದಿಟ್ಟ ಕ್ರಮ ಪಾಕಿಸ್ಥಾನದ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಆದ್ದರಿಂದ ಈ ಕಾಯ್ದೆ ನಿಷೇಧಕ್ಕೆ 1 ವರ್ಷವಾದ ಹಿನ್ನೆಲೆ ಕರಾಳ ದಿನವನ್ನು ಆಚರಿಸಲು ಪಾಕಿಸ್ಥಾನ ನಿರ್ಧರಿಸಿದ್ದು, ಜಮ್ಮು-ಕಾಶ್ಮೀರದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಲು ಕಾರ್ಯತಂತ್ರ ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆಗಳು ಮಾಹಿತಿ ನೀಡಿವೆ. ಈ ಸಂಬಂಧ ಆಗಸ್ಟ್ 3 ರಿಂದ ತೊಡಗಿದಂತೆ 5 ರ ವರೆಗೂ ಕಣಿವೆ ರಾಜ್ಯದಲ್ಲಿ ನಿಷೇಧಾಜ್ಞೆ ಹೊರಡಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಜಿಲ್ಲಾ ಮ್ಯಾಜಿಸ್ಟ್ರೇಟ್ ಶಾಹಿದ್ ಇಕ್ಬಾಲ್ ಚೌಧರಿ, ಪಾಕಿಸ್ಥಾನದಿಂದ ಪ್ರೇರೇಪಣೆ ಪಡೆದುಕೊಂಡಿರುವ ಪ್ರತ್ಯೇಕವಾದಿಗಳ ಗುಂಪು ಆಗಸ್ಟ್ 5 ರಂದು ಹಿಂಸಾತ್ಮಕ ಕೃತ್ಯ ಎಸಗುವ ಸಾಧ್ಯತೆಗಳಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಿ, ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.