ನವದೆಹಲಿ: ವಿದೇಶಗಳಿಂದ ಭಾರತಕ್ಕಾಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಆಗಸ್ಟ್ 8 ರಿಂದಲೇ ಜಾರಿಯಾಗುವಂತೆ ಈ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಈ ಹೊಸ ಮಾರ್ಗಸೂಚಿಯ ಪ್ರಕಾರ, ಆನ್ಲೈನ್ ಪೋರ್ಟಲ್(www.newdelhiairpoer.in) ನಲ್ಲಿ ಪ್ರಯಾಣದ 72 ಗಂಟೆಗೂ ಮೊದಲೇ ಸೆಲ್ಫ್ ಡಿಕ್ಲರೇಷನ್ ಸಲ್ಲಿಸುವಂತೆ ಸೂಚಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರಿಗೂ 14 ದಿನಗಳ ಕ್ವಾರಂಟೈನ್ ಕಡ್ಡಾಯವಾಗಿದ್ದು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಕ್ರಮವನ್ನು ಅನುಸರಿಸತಕ್ಕದ್ದು ಎಂದು ಹೇಳಿದೆ. ತುರ್ತು ಸಂದರ್ಭಗಳಲ್ಲಿ ಮತ್ತು ಪರಿಸ್ಥಿತಿಗೆ ಅನುಗುಣವಾಗಿ, ಮನೆಯಲ್ಲಿ 10 ವರ್ಷದೊಳಗಿನ ಮಕ್ಕಳಿದ್ದರೆ, ವೃದ್ಧರಿಗೆ, ಗರ್ಭಿಣಿಯರಿಗೆ ಮತ್ತು ಮನೆಯಲ್ಲಿ ಯಾರಾದರೂ ಮೃತಪಟ್ಟಿದ್ದರೆ ಇಂತಹ ಸಂದರ್ಭದಲ್ಲಿ 14 ದಿನಗಳ ಹೋಂ ಕ್ವಾರಂಟೈನ್ಗೆ ಒಳಪಡುವಂತೆಯೂ ಸೂಚಿಸಲಾಗಿದೆ. ಇಂತಹ ಅಗತ್ಯತೆಗಳಿದ್ದಲ್ಲಿಯೂ ಆನ್ಲೈನ್ ಪೋರ್ಟಲ್ ಮೂಲಕ 72 ಗಂಟೆಗಳಿಗೂ ಮುನ್ನವೇ ಮನವಿ ಸಲ್ಲಿಸುವಂತೆ ಸರ್ಕಾರ ಸೂಚನೆಯನ್ನು ನೀಡಿದೆ.
ಜೊತೆಗೆ ಪ್ರಯಾಣಿಕರು ಕೊರೋನಾ ಪರೀಕ್ಷೆಯಲ್ಲಿ (RTPCR) ನೆಗೆಟಿವ್ ಬಂದಿರುವ ವರದಿಯನ್ನು ಈ ಸಂದರ್ಭದಲ್ಲಿ ಹಾಜರು ಪಡಿಸುವಂತೆಯೂ ಕೇಂದ್ರ ಸರ್ಕಾರ ತಿಳಿಸಿದೆ. ಪ್ರಯಾಣದ 96 ಗಂಟೆಗಳಿಗೂ ಮೊದಲು ಕೊರೋನಾ ಟೆಸ್ಟ್ ನಡೆಸಿರುವ ದಾಖಲೆಗಳನ್ನು ಪ್ರಯಾಣಕ್ಕೂ ಮುನ್ನ ಕಡ್ಡಾಯವಾಗಿ ಹಾಜರು ಪಡಿಸುವಂತೆಯೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಈ ಎಲ್ಲಾ ದಾಖಲೆಗಳನ್ನೂ ಆನ್ಲೈನ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡುವಂತೆ ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.