ನವದೆಹಲಿ: 2019ರ ನಾಗರಿಕ ಸೇವಾ ಪರೀಕ್ಷೆಗಳ ಅಂತಿಮ ಫಲಿತಾಂಶವನ್ನು ಕೇಂದ್ರ ಸಾರ್ವಜನಿಕ ಆಯೋಗ ಪ್ರಕಟಿಸಿದ್ದು, ಪರೀಕ್ಷೆಯಲ್ಲಿ 829 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಫಲಿತಾಂಶವನ್ನು ಯುಪಿಎಸ್ಸಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ವಿದ್ಯಾರ್ಥಿಗಳ ಪೈಕಿ 304 ಮಂದಿ ಸಾಮಾನ್ಯ ವರ್ಗ, 251 ಅಭ್ಯರ್ಥಿಗಳು ಒಬಿಸಿ, ಆರ್ಥಿಕವಾಗಿ ಹಿಂದುಳಿದ 78 ಮಂದಿ ಅಭ್ಯರ್ಥಿಗಳು, 129 ಮಂದಿ ಪರಿಶಿಷ್ಟ ಜಾತಿ ಮತ್ತು 67 ಮಂದಿ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ ಎಂದೂ ಮೂಲಗಳು ತಿಳಿಸಿವೆ.
ಮೊದಲ ಶ್ರೇಯಾಂಕವನ್ನು ಪ್ರದೀಪ್ ಸಿಂಗ್ ಎಂಬವರು ಗಳಿಸಿದ್ದು, ಜತಿನ್ ಕಿಶೋರ್ ಮತ್ತು ಪ್ರತಿಭಾ ವರ್ಮ ನಂತರದ ಸ್ಥಾನವನ್ನು ಪಡೆದಿದ್ದಾರೆ. ಟಾಪ್ ಟೆನ್ ಪಟ್ಟಿಯಲ್ಲಿ ಮೂವರು ಮಹಿಳೆಯರು ಮತ್ತು ಟಾಪ್ 25 ಪಟ್ಟಿಯಲ್ಲಿ ಒಂಬತ್ತು ಮಹಿಳೆಯರು ಸ್ಥಾನ ಪಡೆದಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.