ಬೆಂಗಳೂರು: ಕೊರೋನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದಲೇ ಸರ್ಕಾರದ ಕೆಲಸ ಕಾರ್ಯಗಳನ್ನು ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳನ್ನು ಹೆಚ್ಚಿಸುವ ಕುರಿತಂತೆ ಬಿಎಸ್ವೈ ಅವರು ಅಧಿಕಾರಿಗಳ ಜೊತೆಗೆ ದೂರವಾಣಿ ಮೂಲಕ ಸಭೆ ನಡೆಸಿದ್ದು, ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ 1,279 ವೆಂಟಿಲೇಟರ್ಗಳು ತಿಂಗಳಾಂತ್ಯಕ್ಕೆ ಲಭ್ಯವಾಗಲಿದ್ದು, ಆ ವೆಂಟಿಲೇಟರ್ಗಳನ್ನು ತಕ್ಷಣವೇ ಅಳವಡಿಸುವಂತೆಯೂ ಸೂಚನೆ ನೀಡಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಈಗಾಗಲೇ 681 ವೆಂಟಿಲೇಟರ್ಗಳನ್ನು ನೀಡಿದೆ. ಇವುಗಳಲ್ಲಿ 335 ವೆಂಟಿಲೇಟರ್ ಹಾಸಿಗೆಗಳನ್ನು ರಾಜ್ಯದಲ್ಲಿ ಈಗಾಗಲೇ ಬಳಕೆ ಮಾಡಲಾಗಿದೆ. ಇನ್ನುಳಿದ 346 ವೆಂಟಿಲೇಟರ್ಗಳನ್ನು ಕೆಲವೇ ದಿನಗಳಲ್ಲಿ ಅಳವಡಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳು ವೆಂಟಿಲೇಟರ್ ಒದಗಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಅವರ ಮನವಿಯ ಬಗ್ಗೆಯೂ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅನೆಸ್ಥಿಟಿಕ್, ಪ್ಯಾರಾಮೆಡಿಕಲ್ ಸಿಬ್ಬಂದಿಗಳ ನೇಮಕ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.