ಗಾಂಧೀನಗರ: ಪವಿತ್ರ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಬೇಕೆಂಬ ರಾಮಭಕ್ತರ ಮೂರು ದಶಕಗಳ ದೀರ್ಘ ಹೋರಾಟಕ್ಕೆ ಇಂದು ಫಲ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.
ಅತ್ತ ಅಯೋಧ್ಯೆಯಲ್ಲಿ ಮೋದಿ ಭವ್ಯ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸುತ್ತಿದ್ದರೆ, ಇತ್ತ ಗುಜರಾತ್ನಲ್ಲಿರುವ ಅವರ ತಾಯಿ ಹೀರಾಬೆನ್ ಮೋದಿ ಅವರು ತಮ್ಮ ನಿವಾಸದಲ್ಲಿ ಟಿವಿ ಪರದೆ ಮುಂದೆ ಕುಳಿತು ಮಂದಿರದ ಭೂಮಿ ಪೂಜೆಯ ವೈಭವೋಪೇತ ದೃಶ್ಯಗಳನ್ನು ಕಣ್ತುಂಬಿಕೊಂಡರು.
ಈ ಐತಿಹಾಸಿಕ ಸಮಾರಂಭವು 135 ಸಂತರು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ನಡೆಯಿತು.
PM @narendramodi‘s mother Hiraba watched Ram Mandir Bhumi Pujan ceremony on TV. pic.twitter.com/cHyjLwAqm2
— Prasar Bharati News Services (@PBNS_India) August 5, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.