ನವದೆಹಲಿ: ಕೊರೋನಾ ಚಿಕಿತ್ಸೆಯಲ್ಲಿ ಜೀವ ಪಣಕ್ಕಿಟ್ಟು ದುಡಿಯುತ್ತಿರುವ ಕೊರೋನಾ ವಾರಿಯರ್ಸ್ಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ, ಸ್ವಾತಂತ್ರ್ಯ ದಿನಕ್ಕೂ ಕೆಲ ದಿನಗಳ ಮೊದಲೇ ದೇಶದ ವಿವಿಧ ನಗರಗಳಲ್ಲಿ ಮಿಲಿಟರಿ ಬ್ಯಾಂಡ್ ಪ್ರದರ್ಶನ ನಡೆಯಲಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆಗಸ್ಟ್ 1 ರಿಂದಲೇ ಈ ಪ್ರದರ್ಶನ ಆರಂಭವಾಗಿರುವುದಾಗಿಯೂ ಮೂಲಗಳು ತಿಳಿಸಿವೆ.
ಪೋರಬಂದರು, ಬೆಂಗಳೂರು, ಹೈದರಾಬಾದ್, ರಾಯಪುರ, ಅಮೃತಸರ, ಗುವಾಹಟಿ, ಅಲಹಾಬಾದ್, ಕೋಲ್ಕತ್ತಾ ಸೇರಿದಂತೆ ಇನ್ನೂ ಹಲವೆಡೆಗಳಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ಪೊಲೀಸರು ಮಿಲಿಟರಿ ಬ್ಯಾಂಡ್ ಪ್ರದರ್ಶನ ನೀಡಲಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಹೇಳಿಕೆ ನೀಡಿರುವ ಭಾರತೀಯ ರಕ್ಷಣಾ ಸಚಿವಾಲಯ, ಕೊರೋನಾ ಸೋಂಕಿತರಿಗೆ ತಮ್ಮ ಜೀವವನ್ನೂ ಲೆಕ್ಕಿಸದೆ ಕೊರೋನಾ ವಾರಿಯರ್ಸ್ ಸೇವೆ ನೀಡುತ್ತಿದ್ದಾರೆ. ಅಪಾಯದ ಸನ್ನಿವೇಶದಲ್ಲಿಯೂ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಅವರಿಗೆ ಗೌರವ ಸೂಚಕವಾಗಿ ಈ ಬ್ಯಾಂಡ್ ಪ್ರದರ್ಶನ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಆಗಸ್ಟ್ 1 ರಿಂದಲೇ ಈ ಪ್ರದರ್ಶನ ಆರಂಭಗೊಂಡಿದ್ದು 15 ದಿನಗಳ ಕಾಲ ದೇಶದ ವಿವಿಧ ನಗರಗಳಲ್ಲಿ ನಿಗದಿ ಮಾಡಲಾದ ದಿನಗಳಂದು ಪ್ರದರ್ಶನ ನಡೆಯಲಿದೆ ಎಂದೂ ಮಾಹಿತಿ ನೀಡಿದ್ದಾರೆ. ಆ ಮೂಲಕ ದೇಶದ ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಿಸಲಾಗುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.