ಮಂಗಳೂರು : ಕರ್ನಾಟಕ ರಾಜ್ಯದಲ್ಲಿ ದ. ಕ. ಜಿಲ್ಲೆಯು ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಗಣನೀಯವಾದ ಸಾಧನೆಯನ್ನು ಮಾಡಿದೆ. ಈ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರವು ವಿದ್ಯಾರ್ಥಿಗಳಿಗೆ ಅನುಕೂಲಕರವಾದಂತಹ ವಾತಾವರಣವನ್ನು ನಿರ್ಮಿಸಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಕಾಲೇಜುಗಳು ಹೊಸ ಹೊಸ ಕೋರ್ಸುಗಳನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಸೃಷ್ಟಿಸಿದೆ.
ಸರ್ಕಾರ ಹಾಗೂ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಬಹುದಾದ ಕೋರ್ಸುಗಳನ್ನು ನೀಡುತ್ತಿದ್ದರೂ ಅದರ ಪ್ರಯೋಜನವನ್ನು ಅನೇಕ ವಿದ್ಯಾರ್ಥಿಗಳು ಪಡೆಯುವುದರಲ್ಲಿ ಹಿಂದೆ ಉಳಿದಿದ್ದಾರೆ. ಈ ನಿಟ್ಟಿನಲ್ಲಿ ಉತ್ತಮ ಉದ್ಯೋಗ ಅವಕಾಶವುಳ್ಳ ಮತ್ತು ತಮ್ಮ ವೃತ್ತಿ ಬದುಕನ್ನು ರೂಪಿಸಿಕೊಳ್ಳಬಹುದಾದ ವಿವಿಧ ವೃತ್ತಿಪರ ಕೋರ್ಸುಗಳ ಬಗ್ಗೆ ಮಾಹಿತಿ ಶಿಬಿರ ಜು.30ರಂದು ಗುರುಪುರದಲ್ಲಿರುವ ಶ್ರೀ ದುರ್ಗಾ ಎಜುಕೇಶನಲ್ ಇನ್ಸ್ಟಿಟ್ಯೂಟ್ ನಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಗೆ ಪ್ರಾರಂಭವಾಗಲಿದೆ. ಈ ಶಿಬಿರದಲ್ಲಿ ದ. ಕ. ಜಿಲ್ಲೆಯ ನುರಿತ ಪ್ರಾಚಾರ್ಯರು ಹಾಗೂ ಬೇರೆ ಬೇರೆ ಕ್ಷೇತ್ರದ ಪ್ರಮುಖ ತಜ್ಞರು ಪಾಲ್ಗೊಳ್ಳಲಿದ್ದಾರೆ. ಇದರ ಸದುಪಯೋಗವನ್ನು ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ. ಉತ್ತಿರ್ಣರಾದ ವಿದ್ಯಾರ್ಥಿಗಳು ಪಡೆದುಕೊಳ್ಳಲು ಹಾಗೂ ತಮ್ಮ ಹೆಸರನ್ನು ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ನೋಂದಾಯಿಸಬೇಕಾಗಿದೆ.
ಸಂಪರ್ಕ ವಿಳಾಸ: ಶ್ರೀ ದುರ್ಗಾ ಎಜುಕೇಶನಲ್ ಇನ್ಸ್ಟಿಟ್ಯೂಟ್ ಗುರುಪುರ. ದೂರವಾಣಿ: 0824-2257668.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.