ಮುಂಬಯಿ: ಪಾಲ್ಘರ್ ಸಾಧುಗಳ ಗುಂಪು ಹಲ್ಲೆ ಪ್ರಕರಣದ ಪರಿಶೀಲನೆಗಾಗಿ ಚಾರ್ಜ್ಶೀಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಮಹಾರಾಷ್ಟ್ರ ಪೊಲೀಸರಿಗೆ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಆರ್ ಸುಭಾಷ್ ರೆಡ್ಡಿ ಅವರನ್ನೊಳಗೊಂಡ ನ್ಯಾಯಪೀಠವು ಮಹಾರಾಷ್ಟ್ರ ಸರ್ಕಾರವನ್ನು ಈ ಬಗ್ಗೆ ಪ್ರಶ್ನಿಸಿದ್ದು, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ವಿವರಣೆ ನೀಡುವಂತೆ ತಿಳಿಸಿದೆ. ಉನ್ನತ ನ್ಯಾಯಾಲಯವು ತನಿಖಾ ವರದಿಗಳು, ತನಿಖೆಯ ವಿವರಗಳನ್ನು ಕೇಳಿದೆ ಮತ್ತು ಪರಿಶೀಲನೆಗಾಗಿ ಈ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಿದೆ.
ಜುನಾ ಅಖಾರ ಅರ್ಚಕರು ಮತ್ತು ಮೃತಪಟ್ಟ ಸಾಧುಗಳ ಕೆಲ ಸಂಬಂಧಿಕರು, ಮಹಾರಾಷ್ಟ್ರ ಸರಕಾರ ಮತ್ತು ಪೊಲೀಸರ ಮೇಲೆ ನಮಗೆ ಯಾವುದೇ ನಂಬಿಕೆ ಇಲ್ಲ. ಈ ಪ್ರಕರಣದಲ್ಲಿ ನ್ಯಾಯಯುತ ತನಿಖೆ ನಡೆಯುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆಯೂ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ಜೂನ್ 11 ರಂದು ಸರ್ವೋಚ್ಚ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವ ಬಗ್ಗೆ ಒಪ್ಪಿಗೆಯನ್ನು ಸೂಚಿಸಿತ್ತು. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.
ಮಹಾರಾಷ್ಟ್ರದ ಪಾಲ್ಘಾರ್ ಪ್ರದೇಶದಲ್ಲಿ ಇಬ್ಬರು ಸಾಧುಗಳನ್ನು ಮತ್ತು ಓರ್ವ ಕಾರು ಚಾಲಕನನ್ನು ಜನರ ಗುಂಪು ಹಲ್ಲೆ ಮಾಡಿ ಕೊಂದು ಹಾಕಿತ್ತು. ಇದು ಇಡೀ ದೇಶದಲ್ಲಿ ಸಂಚಲನವನ್ನು ಸೃಷ್ಟಿ ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರಕಾರದ ಮೇಲೆ ಹಲವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.