ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡುವ ಕುರಿತಂತೆ ಶೀಘ್ರದಲ್ಲೇ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ರಾಜ್ಯ ಸರ್ಕಾರ ತಿಳಿಸಿದೆ.
ಈ ಸಂಬಂಧ ತೃತೀಯ ಲಿಂಗಿಗಳ ಪರವಾಗಿ ಹೋರಾಟ ನಡೆಸುತ್ತಿರುವ ಸಂಗಮ ಮತ್ತು ನಿಶಾ ಗುಳೂರು ಎಂಬುವವರು ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಒಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ರಾಜ್ಯದ ಸಚಿವ ಸಂಪುಟದ ಮುಂದೆ ಶೀಘ್ರದಲ್ಲೇ ಈ ಪ್ರಸ್ತಾವ ಮಂಡನೆಯಾಗಲಿರುವುದಾಗಿಯೂ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ತೃತೀಯ ಲಿಂಗಿಗಳಿಗೆ ಮೀಸಲಾತಿಗಾಗಿ ರಾಜ್ಯ ಸರ್ಕಾರ ಸಂಪುಟದ ಅನುಮೋದನೆ ಪಡೆಯಲು ಕರಡು ನಿಯಮಗಳನ್ನು ನೀಡಲಿದೆ ಎಂದೂ ಅವರು ಕೋರ್ಟ್ಗೆ ತಿಳಿಸಿದ್ದಾರೆ.
ತೃತೀಯ ಲಿಂಗಿಗಳ ಹಕ್ಕುಗಳನ್ನು ಸುಪ್ರೀಂಕೋರ್ಟ್ಎತ್ತಿ ಹಿಡಿದಿದೆ. ಶಿಕ್ಷಣ ಪಡೆಯುವುದು, ಉದ್ಯೋಗ ಕ್ಷೇತ್ರದಲ್ಲಿಯೂ ತೃತೀಯ ಲಿಂಗಿಗಳು ಅವಕಾಶ ಪಡೆದುಕೊಳ್ಳುವುದು ಮೂಲಭೂತ ಹಕ್ಕು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಆದರೆ ರಾಜ್ಯದ ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಪುರುಷ ಮತ್ತು ಮಹಿಳೆಯರಿಗೆ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ತೃತೀಯ ಲಿಂಗಿಗಳಿಗೂ ಅವಕಾಶ ಕಲ್ಪಿಸಬೇಕು ಎಂದು ಕೋರ್ಟ್ಗೆ ಅರ್ಜಿದಾರರು ಮನವಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.