ನವದೆಹಲಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಳಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.
ದೇಶದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಈ ಸಂಬಂಧ ಮೋದಿ ಅವರು ಇಂದು ಭಾರತೀಯರನ್ನುದ್ದೇಶಿಸಿ ಮಾತನಾಡಿದ್ದಾರೆ.
ಈ ಹೊಸ ನೀತಿಯಿಂದಾಗಿ ವಿದ್ಯಾರ್ಥಿಗಳಲ್ಲಿ ಕೌಶಲಗಳು ವೃದ್ಧಿಯಾಗಲಿವೆ. ಜೊತೆಗೆ ಇದು ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಭಾರತೀಯ ಮೌಲ್ಯಗಳನ್ನೊಳಗೊಂಡಂತೆ ಗುರುತಿಸಿಕೊಳ್ಳುವುದಕ್ಕೂ ಪೂರಕವಾಗಲಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಯಾವುದೇ ಕ್ರಾಂತಿಕಾರಕ ಬದಲಾವಣೆಗಳಾಗಿಲ್ಲವಾಗಿದ್ದು ಸದ್ಯ ಈ ಹೊಸ ನೀತಿಯನ್ನು ಅನುಷ್ಠಾನ ಮಾಡಲಾಗಿದೆ. ಇದು ಯುವ ಜನಾಂಗದಲ್ಲಿ ವಿಮರ್ಶಾತ್ಮಕ ದೃಷ್ಟಿಕೋನವನ್ನು ತೆರೆಯುವಂತೆ ಮಾಡುವಲ್ಲಿ ಪೂರಕವಾಗಿ ಕೆಲಸ ಮಾಡಲಿದೆ ಎಂದು ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ನೀತಿಯ ಪ್ರಕಾರ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಲು ಪೂರಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಅವರ ಆಸಕ್ತಿಗೆ ಅನುಸಾರವಾಗಿ ಪೂರಕ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿಯೂ ಪ್ರಯತ್ನ ನಡೆಸಲಾಗುವುದು. ಜೊತೆಗೆ, ಪುಸ್ತಕದ ಹೊರೆ ಕಡಿಮೆ ಮಾಡುವುದು ಈ ಹೊಸ ನೀತಿಯ ಉದ್ದೇಶವಾಗಿದೆ. ಮಕ್ಕಳ ಆಯ್ಕೆಯ ಕಲಿಕೆಯನ್ನು ಆಯ್ಕೆ ಮಾಡುವ ಸ್ವಾತಂತ್ಯವನ್ನು ಅವರಿಗೆ ನೀಡಲಾಗಿದೆ ಎಂದೂ ಮೋದಿ ತಿಳಿಸಿದ್ದಾರೆ.
ನಮ್ಮ ದೇಶದಲ್ಲಿ, ಸಂಶೋಧನೆ ಮತ್ತು ಶಿಕ್ಷಣದ ಅಂತರವನ್ನು ಕೊನೆಗೊಳಿಸುವಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಮುಖ ಪಾತ್ರ ವಹಿಸಲಿದೆ. ಈ ಸುಧಾರಣೆಗಳು ಸಂಸ್ಥೆಗಳು ಮತ್ತು ಮೂಲಸೌಕರ್ಯಗಳಲ್ಲಿಯೂ ಪ್ರತಿಫಲಿಸಿದಾಗ ಮಾತ್ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ವೇಗವಾಗಿ ಕಾರ್ಯಗತಗೊಳಿಸಬಹುದು. ಶಿಕ್ಷಣ ವ್ಯವಸ್ಥೆಯನ್ನು ಬದಲಿಸಲು, ದೇಶಕ್ಕೆಉತ್ತಮ ವಿದ್ಯಾರ್ಥಿಗಳು, ಉತ್ತಮ ವೃತ್ತಿಪರರು ಮತ್ತು ಉತ್ತಮ ನಾಗರಿಕರನ್ನು ನೀಡುವಲ್ಲಿ ಎಲ್ಲಾ ಅಧ್ಯಾಪಕರು ಮತ್ತು ಪ್ರಾಧ್ಯಾಪಕರು ಉತ್ತಮ ಮಾಧ್ಯಮವಾಗಿದ್ದಾರೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.