ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಪ್ರವಾಹದ ಭೀತಿಯನ್ನು ಎದುರಿಸುತ್ತಿವೆ. ಈ ಸಂಬಂಧ ಪರಿಹಾರವಾಗಿ ಸರ್ಕಾರ 50 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಜೊತೆಗೆ ಸಂತ್ರಸ್ಥರಿಗೆ 10 ಸಾವಿರ ರೂ. ಗಳನ್ನು ಪರಿಹಾರವಾಗಿ ಮತ್ತು ಮನೆ ಕುಸಿತಕ್ಕೆ 5 ಲಕ್ಷ ರೂ. ಗಳನ್ನು ಪರಿಹಾರವಾಗಿ ನೀಡುವಂತೆಯೂ ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂಬಂಧ ಅಧಿಕೃತ ಮಾಹಿತಿ ನೀಡಿರುವ ಯಡಿಯೂರಪ್ಪ, ಗ್ರಾಮಗಳಲ್ಲಿನ ಶಾಲಾ ಕಾಲೇಜುಗಳನ್ನು ಸಂತ್ರಸ್ಥರ ಕೇಂದ್ರಗಳನ್ನಾಗಿ ಮಾಡಿ ಜನರಿಗೆ ಅಗತ್ಯ ನೆರವನ್ನು ನೀಡುವಂತೆಯೂ ಸೂಚಿಸಿದ್ದಾರೆ. ಅಲ್ಲದೆ ಜಿಲ್ಲೆಯ ಉಸ್ತುವಾರಿ ಸಚಿವರುಗಳು, ಜಿಲ್ಲಾಧಿಕಾರಿಗಳು ತಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಂಡು ಪರಿಹಾರ ಕಾರ್ಯಗಳನ್ನು ನಡೆಸುವಂತೆಯೂ ಸಿಎಂ ಅನುಮತಿ ನೀಡಿದ್ದಾರೆ.
ರಾಜ್ಯದ ಹಲವೆಡೆ ಭಾರೀ ಮಳೆಯಿಂದಾಗಿ ಅನಾಹುತಗಳು ಸಂಭವಿಸಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗಿನ ಬ್ರಹ್ಮಗಿರಿಯಲ್ಲಿ ಬೆಟ್ಟ ಕುಸಿದು ಅರ್ಚಕರ ಕುಟುಂಬ ಕಾಣೆಯಾಗಿದೆ. ಚಿಕ್ಕಮಗಳೂರಿನಲ್ಲಿಯೂ ವರುಣನ ಅಬ್ಬರ ಜೋರಾಗಿದೆ. ಹಾವೇರಿಯಲ್ಲಿ 80 ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಬೆಳಗಾವಿ, ನಿಪ್ಪಾಣಿಯಲ್ಲಿ ಅಪಾರ ಪ್ರಮಾಣದ ಬೆಳೆನಷ್ಟ ಉಂಟಾಗಿದೆ. ರಾಜ್ಯದ ಹೆಚ್ಚಿನ ನದಿಗಳು ತುಂಬಿ ಹರಿಯುತ್ತಿದ್ದು ಸೇತುವೆಗಳೂ ಮುಳುಗಡೆಯಾಗಿವೆ. ಮಲೆನಾಡು, ಪಶ್ಚಿಮ ಘಟ್ಟ, ಕರಾವಳಿ ತೀರದಲ್ಲಿ ವರುಣ ರುದ್ರತಾಂಡವ ಜೋರಾಗಿದ್ದು ಜನರನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಸೂಚನೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.