ನವದೆಹಲಿ: ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ರಲ್ಲಿ ಡಿಫೆನ್ಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಟೆಕ್ನಾಲಜಿ (ಡಿಐಎಟಿ)ಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
ವರದಿಗಳ ಪ್ರಕಾರ, ಉತ್ತರ ಪ್ರದೇಶದ ನೋಯ್ಡಾ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಈ ತಿಂಗಳ 1 ರಿಂದ 3 ರವರೆಗೆ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2020 ಅನ್ನು ಆಯೋಜನೆಗೊಳಿಸಲಾಗಿತ್ತು.
ಇದರಲ್ಲಿ ಪ್ರಥಮ ಬಹುಮಾನವನ್ನು ಪುಣೆ ಮೂಲದ ಡಿಐಎಟಿ ಪಡೆದುಕೊಂಡಿದೆ. ಕೃತಕ ಬುದ್ಧಿಮತ್ತೆಯನ್ನು ಬಳಸಿಕೊಂಡು ತಾಂತ್ರಿಕ ಸಮಸ್ಯೆಯನ್ನು ಪರಿಹರಿಸುವಲ್ಲಿ ಈ ಸಂಸ್ಥೆಯ ಆರು ಸದಸ್ಯರು ಯಶಸ್ವಿಯಾಗಿದ್ದಾರೆ. ಈ ಮೂಲಕ ಈ ತಂಡವು ಒಂದು ಲಕ್ಷ ರೂಪಾಯಿಗಳನ್ನು ಬಹುಮಾನದ ಮೊತ್ತವಾಗಿ ಸ್ವೀಕರಿಸಿತು.
ಕೃತಕ ಬುದ್ಧಿಮತ್ತೆ (ಎಐ) ಬಳಸಿ ಮುಖ, ಅಭಿವ್ಯಕ್ತಿ ಮತ್ತು ಗೆಸ್ಚರ್ ಅನ್ನು ಗುರುತಿಸಲು ಡಿಐಎಟಿಯ ಆರು ಸದಸ್ಯರ ತಂಡವು “DRISHTI” ಎಂಬ ಪರಿಹಾರವನ್ನು ಒದಗಿಸಿದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
36 ಗಂಟೆಗಳ ತಡೆರಹಿತ ಡಿಜಿಟಲ್ ಉತ್ಪನ್ನ ನಿರ್ಮಾಣ ಸ್ಪರ್ಧೆಯು ಸಾಫ್ಟ್ವೇರ್ ಆವೃತ್ತಿಯ ರಾಷ್ಟ್ರೀಯ ಮಟ್ಟದ ಸ್ಪರ್ಧೆಯಾಗಿದ್ದು, ಇದನ್ನು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಜಂಟಿಯಾಗಿ ಆಯೋಜಿಸಿದೆ.
ಸ್ಪರ್ಧೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೇರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದವರೊಂದಿಗೆ ಸಂವಾದ ನಡೆಸಿದ್ದರು.
ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದ ತಂಡವನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಡಾ.ಜಿ.ಸತೀಶ್ ರೆಡ್ಡಿ ಅಭಿನಂದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.