ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನೂತನ ಕೇಂದ್ರಾಡಳಿತ ಪ್ರದೇಶವಾಗಿ ಹೊರಹೊಮ್ಮಿದ ಬಳಿಕ ಅಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭಗೊಂಡಿದೆ. ಅಲ್ಲಿನ ಶಿಕ್ಷಣ ವಲಯವನ್ನು ಸುಧಾರಣೆ ಮಾಡಲು ಪ್ರಾಮಾಣಿಕ ಪ್ರಯತ್ನಗಳು ನಡೆಯುತ್ತಿವೆ.
ವರದಿಗಳ ಪ್ರಕಾರ, ಶಾಲಾ ಶಿಕ್ಷಣ ಮೂಲಸೌಕರ್ಯವನ್ನು ಹೆಚ್ಚಿಸುವ ಪ್ರಯತ್ನವಾಗಿ ಅಲ್ಲಿ 23 ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿ) ಸ್ಥಾಪಿಸಲಾಗುತ್ತಿದೆ.
ಕೇಂದ್ರಾಡಳಿತ ಪ್ರದೇಶದ ಶಿಕ್ಷಣ ಮೂಲಸೌಕರ್ಯಗಳ ವರ್ಧನೆಗಾಗಿ ಜಮ್ಮು ಮತ್ತು ಕಾಶ್ಮೀರ 36 ಕ್ರಿಯಾತ್ಮಕ ಕೇಂದ್ರೀಯ ವಿದ್ಯಾಲಯಗಳನ್ನು ಈಗಾಗಲೇ ಹೊಂದಿದೆ ಮತ್ತು 23 ಕೇಂದ್ರೀಯ ವಿದ್ಯಾಲಯಗಳ ಸ್ಥಾಪನೆಯನ್ನು ಮಾಡಲು ಭಾರತ ಸರ್ಕಾರದೊಂದಿಗೆ ಸೇರಿ ಕಾರ್ಯ ಮಾಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ ಡಾ.ಅಸ್ಗರ್ ಹಸನ್ ಸಮೂನ್ ಹೇಳಿದ್ದಾರೆ.
ಈ ಕೇಂದ್ರೀಯ ವಿದ್ಯಾಲಯಗಳಿಗೆ ತಾತ್ಕಾಲಿಕ ಸೂಕ್ತವಾದ ವಸತಿ ಸೌಕರ್ಯವನ್ನು ಅಂತಿಮಗೊಳಿಸುವುದರ ಜೊತೆಗೆ ಈ ಉದ್ದೇಶಕ್ಕಾಗಿ ಭೂಮಿಯನ್ನು ಗುರುತಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.