ಶ್ರೀನಗರ: ಜಮ್ಮು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಪುಂಜ್ವಾ ವಿಲ್ಗಾಂನ 23 ವರ್ಷದ ಹುಡುಗಿ ನಾದಿಯಾ ಬೇಗ್ ಯುಪಿಎಸ್ಸಿ ಪರೀಕ್ಷೆಯಲ್ಲಿ 350 ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎರಡನೇ ಬಾರಿಯ ಪ್ರಯತ್ನದಲ್ಲಿ ನಾದಿಯಾ ಯುಪಿಎಸ್ಸಿ ಪರೀಕ್ಷೆಯನ್ನು ಪೂರ್ಣಗೊಳಿಸಿದ್ದು, ಆ ಮೂಲಕ ಭಾರತದ ಕಿರಿಯ ಐಎಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಭಾಜನರಾಗಿದ್ದಾರೆ. ಜೊತೆಗೆ ದೇಶದ ಕುಗ್ರಾಮವೊಂದರಿಂದ ಯುಪಿಎಸ್ಸಿ ಪರೀಕ್ಷೆಯಲ್ಲಿ ಸ್ಥಾನ ಪಡೆದ ಮೊದಲ ಹುಡುಗಿ ಎಂಬ ಕೀರ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಯುಪಿಎಸ್ ಸಿಯಲ್ಲಿ ತೇರ್ಗಡೆಯಾದ ಕಿರಿಯರಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಅಧ್ಯಯನ ನಡೆಸುತ್ತಿರುವ ಸಂದರ್ಭದಲ್ಲೇ ಯುಪಿಎಸ್ಸಿ ಬರೆದು ಐಎಎಸ್ ಅಧಿಕಾರಿಯಾಗಬೇಕೆಂಬ ಕನಸು ಹೊತ್ತಿದ್ದ ಇವರು, ಅದಕ್ಕಾಗಿ ಅಂದಿನಿಂದಲೇ ಅಧ್ಯಯನವನ್ನೂ ಆರಂಭಿಸಿದ್ದರು. ಕುಪ್ವಾರದ ಸರ್ಕಾರಿ ಶಾಲೆಯಲ್ಲಿ 12 ನೇ ತರಗತಿ ವರೆಗೆ ವ್ಯಾಸಂಗ ಮಾಡಿದ ಇವರು ಪದವಿಯನ್ನು ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪಡೆದಿದ್ದಾರೆ.
ತಮ್ಮ ಹೆತ್ತವರು ಮತ್ತು ಒಡಹುಟ್ಟಿದವರ ಸಹಕಾರದಿಂದಲೇ ತಾವಿಂದು ಯುಪಿಎಸ್ಸಿ ಪರೀಕ್ಷೆಯಲ್ಲಿ 350 ನೇ ಸ್ಥಾನ ಪಡೆದಿರುವುದಾಗಿಯೂ ಅವರು ತಿಳಿಸಿದ್ದಾರೆ. ಸಮಾಜಶಾಸ್ತ್ರ ವಿಷಯದಲ್ಲಿ ಕೋಚಿಂಗ್ ಪಡೆದುಕೊಂಡು, ಉಳಿದ ವಿಷಯಗಳನ್ನು ತಾನೇ ತನ್ನ ಸಹೋದರನ ನೆರವಿನೊಂದಿಗೆ ಅಧ್ಯಯನ ನಡೆಸಿದ್ದು, ಕಠಿಣ ಪರಿಶ್ರಮದಿಂದಲೇ ತನಗೆ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಗುರಿಯನ್ನು ಸಾಧಿಸುವ ದೃಢ ನಿಶ್ಚಯ ಮತ್ತು ಕಠಿಣ ಪರಿಶ್ರಮವು ನಮ್ಮ ಕನಸನ್ನು ಸಾಕಾರಗೊಳಿಸಲು ಸಹಾಯ ಮಾಡಿರುವುದಾಗಿಯೂ ಅವರು ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.