ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ ಬೆನ್ನಲ್ಲೇ, ರಾಜ್ಯದ ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ಐಪಿಎಸ್ ಅಧಿಕಾರಿ ರೂಪ ಡಿ. ಅವರನ್ನು ನೇಮಕ ಮಾಡಲಾಗಿದೆ.
ರೈಲ್ವೆ ಇಲಾಖೆಯ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರೂಪ ಅವರನ್ನು ಸರ್ಕಾರ ಗೃಹ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿ ಆದೇಶ ಹೊರಡಿಸಿದೆ. ಆ ಮೂಲಕ ರಾಜ್ಯದ ಗೃಹ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ನೇಮಕವಾದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಯನ್ನೂ ರೂಪಾ ತಮ್ಮದಾಗಿಸಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ರೂಪ ಅವರು, ಈ ಸಂದರ್ಭದಲ್ಲಿ ತಮಗೆ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೂ ರೂಪ ಬಾಜನರಾಗಿದ್ದಾರೆ.
I’ve assumed charge as Home Secretary,Govt of Karnataka. Incidentally, I learnt that I am the first woman in that post.
ಇವತ್ತು ಗೃಹ ಇಲಾಖೆ ಕಾರ್ಯದರ್ಶಿಯಾಗಿ ಪ್ರಭಾರ ವಹಿಸಿಕೊಂಡೆ. ಆ ಹುದ್ದೆಯಲ್ಲಿ ನಾನು ಪ್ರಥಮ ಮಹಿಳೆ ಎನ್ನುವುದು ತಿಳಿಯಿತು. Thanks for all your wishes. https://t.co/d1v8wixsCa— D Roopa IPS (@D_Roopa_IPS) August 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.