ಶ್ರೀನಗರ: ಕಾಶ್ಮೀರ ಕಣಿವೆಯ ಪೂಂಚ್ ಜಿಲ್ಲೆಯಲ್ಲಿ ಶುಕ್ರವಾರ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಜಂಟಿ ಶೋಧ ಕಾರ್ಯಾಚರಣೆ ನಡೆಸಿ ಭಯೋತ್ಪಾದಕ ಅಡಗುತಾಣವನ್ನು ಭೇದಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ, ಮಂಗ್ನಾರ್ ಉನ್ನತ ಪ್ರದೇಶದ ಕಲ್ಸಾ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕ ಅಡಗುತಾಣ ಪತ್ತೆಯಾಗಿದೆ. ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಶೋಧ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಈ ವೇಳೆ ಎರಡು ಎಕೆ -47 ರೈಫಲ್ಗಳನ್ನು ಮತ್ತು ನಾಲ್ಕು ಮ್ಯಾಗಜೀನ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಳವಣಿಗೆಯ ಕುರಿತು ಮಾತನಾಡಿದ ಪೂಂಚ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಆಂಗ್ರಾಲ್ ಅವರು, “ಈ ಪ್ರದೇಶವು ಕುಖ್ಯಾತ ಅಕ್ರಮ ಒಳನುಸುಳುವಿಕೆಗೆ ಮಾರ್ಗವಾಗಿತ್ತು ಮತ್ತು ನಾವು ಸಾಮಾನ್ಯವಾಗಿ ಈ ರೀತಿಯ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಲೇ ಇರುತ್ತೇವೆ” ಎಂದು ಹೇಳಿದ್ದಾರೆ.
ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳ ಮತ್ತು ಅಡಗುತಾಣ ಹೊಂದಿರುವ ನಂಟಿನ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲು ಕಾರ್ಯಪಡೆ ಸ್ಥಾಪಿಸಲಾಗಿದೆ ಎಂದು ಆಂಗ್ರಾಲ್ ಒತ್ತಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಮತ್ತು ಈ ಪ್ರದೇಶದಲ್ಲಿ ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.