ತಿರುವನಂತಪುರ: ದುಬೈನಿಂದ ಭಾರತಕ್ಕೆ ಬರುವ ಪ್ರಯಾಣಿಕರನ್ನು ಹೊತ್ತು ಕೇರಳದ ಕೋಯಿಕ್ಕೋಡ್ಗೆ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ನಿನ್ನೆ ರಾತ್ರಿ ರನ್ವೇ ನಿಂದ ಜಾರಿ ಸಮೀಪದಲ್ಲಿದ್ದ ಕಣಿವೆಗೆ ಬಿದ್ದು ಎರಡು ಭಾಗವಾಗಿತ್ತು. ಈ ದುರಂತದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದಾರೆ.
ದುರಂತ ಸಂಭವಿಸಿದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿ ಪರಿಶೀಲನೆ ನಡೆಸಿದ ಬಳಿಕ ಸಚಿವರು ಪರಿಹಾರ ಧನ ನೀಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟವರಿಗೆ 10 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 2 ಲಕ್ಷ ರೂ. ಗಳನ್ನು ಪರಿಹಾರ ಮೊತ್ತವಾಗಿ ನೀಡುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ. ಸಣ್ಣಪುಟ್ಟ ಗಾಯಗಳ ಮೂಲಕ ಪಾರಾದವರಿಗೆ 50 ಸಾವಿರ ರೂ. ಗಳ ಪರಿಹಾರ ನೀಡುವ ಭರವಸೆಯನ್ನೂ ಅವರು ನೀಡಿದ್ದಾರೆ.
ಈ ಪ್ರಕರಣವನ್ನು ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ಕೈಗೆತ್ತಿಕೊಂಡಿದ್ದು ತನಿಖೆ ನಡೆಸುತ್ತಿದೆ. ಅಪಘಾತವಾದ ವಿಮಾನದ ಡಿಜಿಟಲ್ ಫ್ಲೈಟ್ ಡಾಟಾ ರೆಕಾರ್ಡರ್ ಮತ್ತು ಕಾಕ್ಪಿಟ್ ವಾಯ್ಸ್ ರೆಕಾರ್ಡರ್ಗಳನ್ನೂ ಈಗಾಗಲೇ ಪತ್ತೆ ಹಚ್ಚಲಾಗಿದೆ. ಈ ದುರಂತದ ಕುರಿತಂತೆ ಮಾಹಿತಿ ಪಡೆದುಕೊಳ್ಳುವ ಸಲುವಾಗಿ ತಾವು ಭೇಟಿ ನೀಡಿದ್ದಾಗಿಯೂ ಪುರಿ ಮಾಹಿತಿ ನೀಡಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು, ವೃತ್ತಿಪರರ ಜೊತೆಗೂ ಚರ್ಚಿಸುವುದಾಗಿ ಈ ಸಂದರ್ಭ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.