ಜೈಪುರ: ರಾಜಸ್ಥಾನದ ಬರ್ಮೆರ್ ಪ್ರದೇಶದ ಅಂತರರಾಷ್ಟ್ರೀಯ ಗಡಿಯಲ್ಲಿ ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಪಾಕಿಸ್ಥಾನಿ ನುಸುಳುಕೋರನನ್ನು ಬಿಎಸ್ಎಫ್ ಯೋಧರು ಹೊಡೆದುರುಳಿಸಿದ್ದಾರೆ.
ವರದಿಗಳ ಪ್ರಕಾರ, ಬಕ್ಸಾರ್ ಪ್ರದೇಶದಲ್ಲಿ ಗಡಿಯ ಮತ್ತೊಂದು ಭಾಗದಿಂದ ಪಾಕಿಸ್ಥಾನದ ಅಕ್ರಮ ನುಸುಳುಕೋರರು ದೇಶದೊಳಕ್ಕೆ ಬರಲು ಪ್ರಯತ್ನ ನಡೆಸುತ್ತಿರುವುದನ್ನು ಗಮನಿಸಿದ ಭಾರತೀಯ ಭದ್ರತಾ ಪಡೆ ಅವರಿಗೆ ಎಚ್ಚರಿಕೆ ನೀಡುವ ಕೆಲಸವನ್ನು ಮಾಡಿದೆ. ಆದರೆ ಈ ಎಚ್ಚರಿಕೆಗೆ ಬಗ್ಗದ ನುಸುಳುಕೋರರು ದೇಶದೊಳಕ್ಕೆ ನುಗ್ಗುವ ಕೆಲಸವನ್ನು ಮುಂದುವರೆಸಿದ್ದಾರೆ. ಈ ಸಂದರ್ಭದಲ್ಲಿ ಬಿಎಸ್ಎಫ್ ಯೋಧರು ಗುಂಡು ಹಾರಿಸಿದ್ದು, ಓರ್ವನನ್ನು ಸಂಹರಿಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಯೋಧರು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಆಗಸ್ಟ್ 15 ರ ಸ್ವಾತಂತ್ರ್ಯ ದಿನದಂದು ಭಾರತದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಪಾಕಿಸ್ಥಾನ ಪ್ರೇರಿತ ಉಗ್ರರು ಸಂಚು ನಡೆಸುತ್ತಿದ್ದಾರೆ ಎಂದು ಕೆಲ ದಿನಗಳ ಹಿಂದಷ್ಟೇ ಭಾರತೀಯ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಗಡಿ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.