ನವದೆಹಲಿ: ಕ್ವಿಟ್ ಇಂಡಿಯಾ ದಿನದ 78 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶಾದ್ಯಂತದ 202 ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಪುರಸ್ಕರಿಸಿದ್ದಾರೆ.
ವರದಿಗಳ ಪ್ರಕಾರ, ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವ ಸಲುವಾಗಿ ಪ್ರತಿವರ್ಷ ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿಗಳು ಅಟ್ ಹೋಮ್ ಔತನಕೂಟವನ್ನು ಆಯೋಜಿಸುತ್ತಾರೆ ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ.
ಕೋವಿಡ್ -19 ಸಾಂಕ್ರಾಮಿಕ ರೋಗದ ದೃಷ್ಟಿಯಿಂದ ಈ ವರ್ಷ ಅಟ್ ಹೋಮ್ ಔತನಕೂಟವನ್ನು ಆಯೋಜಿಸಲಾಗಲಿಲ್ಲ. ರಾಷ್ಟ್ರಪತಿಗಳ ಪರವಾಗಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಥವಾ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಅವರು ಶಾಲು ಮತ್ತು ಅಂಗವಸ್ತ್ರದೊಂದಿಗೆ ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಿ ಸನ್ಮಾನಿಸುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ಮನವಿ ಮಾಡಲಾಗಿತ್ತು
ರಾಷ್ಟ್ರಪತಿ ಭವನವು ತಮ್ಮ ನಿವಾಸಿ ಆಯುಕ್ತರ ಮೂಲಕ ರಾಜ್ಯ ಮತ್ತು ಕೆಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ಅಂಗವಸ್ತ್ರ ಮತ್ತು ಶಾಲುಗಳನ್ನು ಒದಗಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.