ನವದೆಹಲಿ: ವಿಶ್ವ ಜೈವಿಕ ಇಂಧನ ದಿನಾಚರಣೆಯ ಹಿನ್ನೆಲೆಯಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ʼಆತ್ಮನಿರ್ಭರ ಭಾರತದತ್ತ ಜೈವಿಕ ಇಂಧನʼಗಳು ಎಂಬ ವೆಬ್ನಾರ್ ಅನ್ನು ಇಂದು ಆಯೋಜಿಸಿದೆ.
ವರದಿಗಳ ಪ್ರಕಾರ, ಸಾಂಪ್ರದಾಯಿಕ ಇಂಧನಗಳಿಗೆ ಪರ್ಯಾಯವಾಗಿ ಜೈವಿಕ ಇಂಧನಗಳ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಆಗಸ್ಟ್ 10 ರಂದು ವಿಶ್ವ ಜೈವಿಕ ಇಂಧನ ದಿನವನ್ನು ಆಚರಿಸಲಾಗುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿ ತರುಣ್ ಕಪೂರ್, ದೇಶದಲ್ಲಿ ಹೆಚ್ಚಿನ ಪ್ರಮಾಣದ ಕೃಷಿ ಉಳಿಕೆಗಳು ಲಭ್ಯವಿದ್ದು, ಆದ್ದರಿಂದ ಜೈವಿಕ ಇಂಧನಗಳನ್ನು ಉತ್ಪಾದಿಸುವ ವ್ಯಾಪ್ತಿ ಅಪಾರವಾಗಿದೆ ಎಂದಿದ್ದಾರೆ.
ಜೈವಿಕ ಇಂಧನಗಳ ಮೂರು ಪ್ರಮುಖ ಕ್ಷೇತ್ರಗಳಿವೆ- ಎಥೆನಾಲ್, ಬಯೋ ಡೀಸೆಲ್ ಮತ್ತು ಜೈವಿಕ ಅನಿಲ. ಈ ಮೂರು ಮೂಲಗಳನ್ನು ಸದ್ಭಳಕೆ ಮಾಡಿಕೊಂಡರೆ, ಕಚ್ಚಾ ಮತ್ತು ಅನಿಲದ ಆಮದಿನ ಮೇಲಿನ ಅವಲಂಬನೆಯನ್ನು ಬಹಳ ದೊಡ್ಡ ಮಟ್ಟಕ್ಕೆ ಇಳಿಸಬಹುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.