ಬೆಂಗಳೂರು: ನಿನ್ನೆಯಷ್ಟೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಯಾದಗಿರಿ ಜಿಲ್ಲೆಯ ಬಡ ಕುಟುಂಬವೊಂದರಿಂದ ಬಂದ ಮಹೇಶ್ ಎಂಬವರು 616/625 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ತೀರಾ ಬಡ ಕುಟುಂಬದಿಂದ ಹಿನ್ನೆಲೆಯ ಈ ಹುಡುಗನ ಮನೆಗೆ ಇಂದು ಸಚಿವ ಸುರೇಶ್ ಕುಮಾರ್ ಅವರು ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.
ಈತನ ಕುಟುಂಬ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿದ್ದು ಪುಟ್ಟ ಜೋಪಡಿಯಲ್ಲಿ ವಾಸಿಸುತ್ತಿದ್ದಾರೆ. ಇಂದಿರಾ ನಗರದ ಜೀವನಭೀಮಾ ನಗರ ವ್ಯಾಪ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿ. ಮಹೇಶನ ತಾಯಿ ಮಲ್ಲವ್ವ ಅವರಿವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಈತ ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಕೂಲಿ ಕೆಲಸ ಮಾಡಿಕೊಂಡೇ ಎಸ್ಎಸ್ಎಲ್ಸಿಯಲ್ಲಿ ಈ ಸಾಧನೆ ಮಾಡಿದ್ದಾರೆ.
ತೀರಾ ಬಡ ಕುಟುಂಬದ ಹಿನ್ನೆಲೆಯ ಈ ಹುಡುಗ 616 ಅಂಕಗಳ ಜೊತೆಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣನಾಗಿದ್ದು, ಆತನಿಗೆ ಮುಂದೆ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡುವ ಆಸೆ ಇದೆ. ಇದಕ್ಕೆ ಬೇಕಾದ ನೆರವು ಒದಗಿಸಿ ಕೊಡುವ ಭರವಸೆಯನ್ನೂ ಸಚಿವ ಸುರೇಶ್ ಕುಮಾರ್ ನೀಡಿದ್ದಾರೆ.
ಬಡ ಬಾಲಕನ ಅಮೋಘ ಸಾಧನೆಯ ವಿಚಾರವನ್ನು ಸಚಿವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿಯೂ ಹಂಚಿಕೊಂಡಿದ್ದಾರೆ.
#ಮಹೇಶ ಯಾದಗಿರಿಯಿಂದ ಬೆಂಗಳೂರಿಗೆ ಗುಳೆ ಬಂದಿರುವ ಕುಟುಂಬಕ್ಕೆ ಸೇರಿದ ಬಾಲಕ. ಇಂದಿರಾನಗರದ ಜೀವನಭೀಮಾನಗರದ ವ್ಯಾಪ್ತಿಯಲ್ಲಿರುವ ಕರ್ನಾಟಕ…
Posted by Suresh Kumar S on Monday, August 10, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.