ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಮುಖಾಮುಖಿಯಲ್ಲಿ ಓರ್ವ ಸೇನಾ ಯೋಧ ಹುತಾತ್ಮರಾದರು ಮತ್ತು ಓರ್ವ ಅಪರಿಚಿತ ಭಯೋತ್ಪಾದಕನನ್ನು ಸಂಹಾರ ಮಾಡಲಾಗಿದೆ.
“ಪ್ರಸ್ತುತ ನಡೆಯುತ್ತಿರುವ ಪುಲ್ವಾಮಾ ಎನ್ಕೌಂಟರ್ನಲ್ಲಿ ಓರ್ವ ಸೈನಿಕ ಪ್ರಾಣ ಕಳೆದುಕೊಂಡು ಹುತಾತ್ಮರಾಗಿದ್ದಾರೆ. ಸ್ಥಳದಿಂದ ಒಂದು ಎಕೆ 47 ಜೊತೆಗೆ ಗ್ರೆನೇಡ್, ಚೀಲಗಳು ಮತ್ತು ಇತರ ಯುದ್ಧ ಪರಿಕರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು, 53 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ದೊರೆತ ಬಳಿಕ ಕಾರ್ಯಾಚರಣೆ ಪ್ರಾರಂಭವಾಗಿದೆ. ಪುಲ್ವಾಮಾದ ಕಮ್ರಾಜಿಪೊರಾದಲ್ಲಿ ನಡೆದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ವಿನಿಮಯ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಮುಂಜಾನೆ 3 ಗಂಟೆ ಸುಮಾರಿಗೆ ಗುಂಡಿನ ವಿನಿಮಯ ಪ್ರಾರಂಭವಾಗಿದೆ ಮತ್ತು ಗಾಯಗೊಂಡ ಸೇನಾ ಜವಾನ್ ಒಬ್ಬರನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.