ಬೆಂಗಳೂರು: ದುಷ್ಕರ್ಮಿಗಳ ಗುಂಪೊಂದು ಬೆಂಗಳೂರಿನ ಡಿಜೆ ಹಳ್ಳಿಯನ್ನು ಅಕ್ಷರಶಃ ಬೆಂಕಿಗೆ ಆಹುತಿ ಮಾಡಿದೆ. ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ದುಷ್ಕರ್ಮಿಗಳು ರಾಕ್ಷಸೀ ಕೃತ್ಯವನ್ನು ಎಸಗಿದ್ದಾರೆ.
ಪೊಲೀಸ್ ಠಾಣೆ ಮೇಲೆ ದಾಳಿಯನ್ನು ನಡೆಸಲಾಗಿದೆ, ಹಲವು ವಾಹನಗಳನ್ನು ಜಖಂ ಮಾಡಲಾಗಿದೆ. ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಪೆಟ್ರೋಲ್ ಬಾಂಬ್ಗಳನ್ನು ಎಸೆಯಲಾಗಿದೆ. ಕೈಯಲ್ಲಿ ಖಡ್ಗ ಹಿಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿರುವ ದೃಶ್ಯಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.
ಉದ್ರಿಕ್ತರನ್ನು ತಡೆಯಲು ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 30 ಮಂದಿ ಗಲಭೆಕೋರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೂ ಬಲೆ ಬೀಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಪತ್ರಕರ್ತರು, ಪೊಲೀಸರು ಹಾಗೂ ಸಾರ್ವಜನಿಕರ ಮೇಲಿನ ದಾಳಿಯನ್ನು ಸಹಿಸಲು ಅಸಾಧ್ಯವಾದದ್ದು. ಪ್ರಚೋದನಕಾರಿ ಮತ್ತು ವದಂತಿಗಳನ್ನು ಹಬ್ಬಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. (1/2)
— B.S. Yediyurappa (@BSYBJP) August 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.