ಬೆಂಗಳೂರು: ರೈತರು ಮತ್ತು ಕೃಷಿ ಇಲಾಖೆ ನಡುವಿನ ಬಾಂಧವ್ಯವನ್ನು ಮತ್ತಷ್ಟು ಹೆಚ್ಚಿಸಲು ರಾಜ್ಯ ಇ ಆಡಳಿತ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್ ಅನ್ನು ಕೃಷಿ ಸಚಿವ ಬಿ.ಸಿ. ಪಾಟೀಲ್ ಆನ್ಲೈನ್ ಮೂಲಕ ಲೋಕಾರ್ಪಣೆ ಮಾಡಿದ್ದಾರೆ.
ಈ ಮಹತ್ವಾಕಾಂಕ್ಷಿ ಆ್ಯಪ್ ಮೂಲಕ ಇಂಟರ್ನೆಟ್ ಸಹಾಯದಿಂದ ರೈತರು ಕುಳಿತಲ್ಲೇ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ, ಸಮೀಕ್ಷೆ ನಡೆಸುವವರ ವಿವರವನ್ನು ಪಡೆದುಕೊಳ್ಳುವುದು ಸಾಧ್ಯವಾಗಲಿದೆ. ರಾಜ್ಯದ ರೈತರಿಗೆ ಸರ್ಕಾರ ರೂಪಿಸಲಿರುವ ಹೊಸಹೊಸ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪುವಂತೆ ಮಾಡಲು, ಲಾಭದಾಯಕ ಕಾರ್ಯಕ್ರಮಗಳನ್ನು ರೂಪಿಸಲು ಸರ್ಕಾರ ಈ ಆ್ಯಪ್ ಅನ್ನು ಆರಂಭಿಸಿದೆ.
ಸುಮಾರು 60 ಎಂ.ಬಿ. ಗಳುಳ್ಳ ಈ ಆ್ಯಪ್ ಅನ್ನು ರೈತರು ಪ್ಲೇ ಸ್ಟೋರ್ ಮೂಲಕ ಡೌನ್ಲೋಡ್ ಮಾಡಿ ಬಳಕೆ ಮಾಡಬಹುದಾಗಿದೆ. ಬಳಿಕ ತಮ್ಮ ಮೊಬೈಲ್ ಸಂಖ್ಯೆ, ವಿಳಾಸಗಳನ್ನು ನಮೂದಿಸುವ ಮೂಲಕ ಇದನ್ನು ಬಳಕೆ ಮಾಡಬಹುದಾಗಿದೆ. ರಾಜ್ಯದ ಯಾವುದೇ ಯೋಜನೆಯಿಂದ ರೈತರು ವಂಚಿತರಾಗಬಾರದು ಎಂಬ ಕಾರಣಕ್ಕೆ ಇದನ್ನು ಆರಂಭ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಬೆಳೆ ಸಮೀಕ್ಷೆ 2020-21ಸಾಲಿನಲ್ಲಿ ರೈತ ಬಾಂಧವರು ತಮ್ಮ ಜಮೀನಿನ ಮುಂಗಾರು ಹಂಗಾಮಿನ ಬೆಳೆ ವಿವರಗಳನ್ನು ತಾವೇ ಸ್ವತಃ ಮೊಬೈಲ್ ತಂತ್ರಾಶದ ಮೂಲಕ ದಾಖಲಿಸಬಹುದಾಗಿದೆ.
https://play.google.com/store/apps/details
id=com.csk.KariffTPKfarmer.cropsurvey
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿ ಆ ಮೂಲಕ ಬೆಳೆ ವಿವರ ದಾಖಲಿಸಬಹುದಾಗಿದೆ. ಬೆಳೆ ವಿವರ ದಾಖಲಿಸಲು ಕೊನೆಯ ದಿನಾಂಕ: 24-08-2020
ಈ ಸಂಬಂಧ ಕೃಷಿ, ಕಂದಾಯ ಮತ್ತು ತೋಟಗಾರಿಕೆ ಇಲಾಖೆಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ತಿಳಿಯಬಹುದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.