ರಾಯ್ಪುರ: ಛತ್ತೀಸ್ಗಢದದ ಸುಕ್ಮಾ ಜಿಲ್ಲೆಯ ಜಗರಗುಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ವರು ನಕ್ಸಲರನ್ನು ಭದ್ರತಾ ಪಡೆಗಳು ಗುಂಡಿಟ್ಟು ಸಂಹಾರ ಮಾಡಿದ್ದಾರೆ.
ಜಿಲ್ಲೆಯ ಫುಲಂಪರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಗಸ್ತು ನಿರತರಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಅಲ್ಲೇ ವಾಸ್ತವ್ಯ ಹೂಡಿದ್ದ ಮಾವೋವಾದಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ಪ್ರತಿ ದಾಳಿ ನಡೆಸಿರುವ ಭದ್ರತಾ ಪಡೆಗಳ ಗುಂಡಿಗೆ 4 ಮಂದಿ ನಕ್ಸಲರ ವಧೆಯಾಗಿದೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಈ ಸಂದರ್ಭದಲ್ಲಿ ಹಲವು ಮಂದಿ ನಕ್ಸಲರು ಸ್ಥಳದಿಂದ ಕಾಲ್ಕಿತ್ತಿದ್ದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಡಿಸ್ಟ್ರಿಕ್ಟ್ ರಿಸರ್ವ್ ವಾರ್ಡ್ (ಡಿಆರ್ಜಿ), ಸೆಂಟ್ರಲ್ ರಿಸರ್ವ್ ಪೋಲೀಸ್ ಫೋರ್ಸ್, ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ Action (ಕೋಬ್ರಾ) ಪಡೆಗಳು ಭಾಗಿಯಾದ್ದಾಗಿ ತಿಳಿದು ಬಂದಿದೆ.
ಘಟನಾ ಸ್ಥಳದಿಂದ 303 ರೈಫಲ್ಗಳು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಅಂತೆಯೇ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿರುವುದಾಗಿಯೂ ಭದ್ರತಾ ಪಡೆಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.